March 11, 2026
Wednesday, March 11, 2026
spot_img

ಕುತ್ತಾರು ಬಳಿ ಹಿಟ್ ಆಂಡ್ ರನ್: ಬೈಕ್ ಧಾವಂತಕ್ಕೆ ಬಲಿಯಾಯಿತು ರಸ್ತೆ ದಾಟುತ್ತಿದ್ದ ಪಾದಚಾರಿಯ ಜೀವ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಬೈಕ್ ಢಿಕ್ಕಿ ಹೊಡೆದ ಪರಿಣಾಮ ಗಂಭೀರ ಗಾಯಗೊಂಡಿದ್ದ ಪಾದಚಾರಿ ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಮಂಗಳೂರು ನಗರದ ಹೊರವಲಯ ಕುತ್ತಾರು ಸಮೀಪದ ಮದನಿ ನಗರ ಮುಖ್ಯ ರಸ್ತೆಯಲ್ಲಿ ನಡೆದಿದೆ.

ಮುಂಡೋಳಿ ನಿವಾಸಿ ದಿನೇಶ್ ಗಟ್ಟಿ (50) ಮೃತ ಪಟ್ಟ ವ್ಯಕ್ತಿಯಾಗಿದ್ದಾರೆ.

ದಿನೇಶ್ ಗಟ್ಟಿ, ಮಂಗಳವಾರ ರಾತ್ರಿ ಮದನಿ ನಗರ ಎಂಬಲ್ಲಿ ರಸ್ತೆ ದಾಟುತ್ತಿದ್ದ ವೇಳೆ ವೇಗವಾಗಿ ಬಂದ ಬೈಕೊಂದು ಢಿಕ್ಕಿ ಹೊಡೆದಿದೆ. ಢಿಕ್ಕಿಯ ರಭಸಕ್ಕೆ ಬೈಕ್ ಸವಾರ ಕೂಡ ರಸ್ತೆಗೆಯಲ್ಪಟ್ಟಿದ್ದು ತಕ್ಷಣವೇ ಆತ ಬೈಕ್ ಏರಿ ಸ್ಥಳದಿಂದ ಪರಾರಿಯಾಗಿದ್ದಾನೆ.

ಗಂಭೀರ ಗಾಯಗೊಂಡಿದ್ದ ದಿನೇಶ್ ಗಟ್ಟಿ ಅವರನ್ನ ತಕ್ಷಣ ಆಸ್ಪತ್ರೆಗೆ ದಾಖಲಿಸಿದರೂ ಬುಧವಾರ ಬೆಳಿಗ್ಗೆ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ.

ಮೃತರು ಕೃಷಿಕರಾಗಿದ್ದು, ಪತ್ನಿ ಹಾಗೂ ಇಬ್ಬರು ಗಂಡು ಮಕ್ಕಳನ್ನು ಅಗಲಿದ್ದಾರೆ. ಘಟನೆ ಸಂಬಂಧಿ ಮಂಗಳೂರು ದಕ್ಷಿಣ ಸಂಚಾರಿ ಠಾಣಾ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !