ಹೊಸದಿಗಂತ ಡಿಜಿಟಲ್ ಡೆಸ್ಕ್:
ಆಕ್ಟಿವಾ ಸ್ಕೂಟರಿಗೆ ಕಾರು ಡಿಕ್ಕಿಯಾದ ಪರಿಣಾಮ ಸ್ಕೂಟರ್ ನಲ್ಲಿ ಪ್ರಯಾಣಿಸುತ್ತಿದ್ದ ಗ್ರಾಮ ಪಂಚಾಯತ್ ಸದಸ್ಯರಿಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಭಾನುವಾರ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಸಮೀಪದ ಕುಂಬ್ರ ಬಳಿ ನಡೆದಿದೆ.
ಒಳಮೊಗ್ರು ಗ್ರಾಮ ಪಂಚಾಯತ್ ಸದಸ್ಯರಾದ ಶೀನಪ್ಪ ನಾಯ್ಕ ಹಾಗೂ ಚಿತ್ರ ಗಾಯಾಳುಗಳು.
ಇವರು ಆಕ್ಟಿವಾ ಸ್ಕೂಟರಿನಲ್ಲಿ ತೆರಳುತ್ತಿದ್ದ ಸಂದರ್ಭ ಕುಂಬ್ರ ಸಮೀಪ ಅಪರಿಚಿತ ಕಾರು ಡಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ ಸ್ಕೂಟರ್ ಪಲ್ಟಿಯಾಗಿದ್ದು, ಚಾಲಕ ಕಾರನ್ನು ನಿಲ್ಲಿಸದೆ ಪರಾರಿಯಾಗಿದ್ದಾನೆ.
ಗಾಯಾಳುಗಳಿಬ್ಬರು ಪುತ್ತೂರು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.