ಹಿಟ್ ಮ್ಯಾನ್ ಬೊಂಬಾಟ್ ಬ್ಯಾಟಿಂಗ್: ಆಸೀಸ್ ಗೆ 206 ಟಾರ್ಗೆಟ್ ನೀಡಿದ ಟೀಮ್ ಇಂಡಿಯಾ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಹಿಟ್ ಮ್ಯಾನ್ ರೋಹಿತ್ ಶರ್ಮಾ ಸ್ಪೋಟಕ ಬ್ಯಾಟಿಂಗ್ ನೆರವಿನಿಂದ ಟೀಂ‌ ಇಂಡಿಯಾ ನಿಗದಿತ 20 ಓವರ್‌ಗಳಲ್ಲಿ 5 ವಿಕೆಟ್ ಕಳೆದುಕೊಂಡು 205 ರನ್ ಗಳಿಸಿದ್ದು, ಆಸ್ಟ್ರೇಲಿಯಾಗೆ ಕಠಿಣ ಗುರಿ ನೀಡಿದೆ.

ಡ್ಯಾರೆನ್ ಸ್ಯಾಮಿ ಸ್ಟೇಡಿಯಂನಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಭಾರತ ಉತ್ತಮ ಆರಂಭ ಪಡೆಯಲು ವಿಫಲವಾಯಿತು. ವಿರಾಟ್ ಕೊಹ್ಲಿ ಐದು ಎಸೆತಗಳನ್ನು ಎದುರಿಸಿ ಖಾತೆ ತೆರೆಯುವ ಮುನ್ನವೇ ವಿಕೆಟ್ ಒಪ್ಪಿಸಿದರು.

ಇದಾದ ಬಳಿಕ ಎರಡನೇ ವಿಕೆಟ್ ಗೆ ಜತೆಯಾದ ರಿಷಭ್ ಪಂತ್ ಹಾಗೂ ರೋಹಿತ್ ಶರ್ಮಾ ಕೇವಲ 38 ಎಸೆತಗಳನ್ನು ಎದುರಿಸಿ 87 ರನ್ ಗಳ ಜತೆಯಾಟವಾಡುವ ಮೂಲಕ ತಂಡಕ್ಕೆ ಆಸರೆಯಾದರು.
ಕಳೆದ ಕೆಲ ಪಂದ್ಯಗಳಲ್ಲಿ ರನ್ ಗಳಿಸಲು ಪರದಾಡಿದ್ದ ಹಿಟ್ ಮ್ಯಾನ್ ಖ್ಯಾತಿಯ ರೋಹಿತ್ ಶರ್ಮಾ ಕೊನೆಗೂ ಫಾರ್ಮ್ ಗೆ ಮರಳುವಲ್ಲಿ ಯಶಸ್ವಿಯಾದರು. ಆಸೀಸ್ ಬೌಲರ್ ಗಳ ಮೇಲೆ ಸವಾರಿ ಮಾಡಿದ ರೋಹಿತ್ ಶರ್ಮಾ ಕೇವಲ 41ಎಸೆತಗಳನ್ನು ಎದುರಿಸಿ 7 ಬೌಂಡರಿ ಹಾಗೂ 8 ಸಿಕ್ಸರ್ ಸಹಿತ 92 ರನ್ ಗಳಿಸಿ ಮಿಚೆಲ್ ಸ್ಟಾರ್ಕ್ ಬೌಲಿಂಗ್ ನಲ್ಲಿ ಕ್ಲೀನ್ ಬೌಲ್ಡ್ ಆಗಿ ಪೆವಿಲಿಯನ್ ಸೇರಿದರು. ಇದಾದ ಬಳಿಕ ಮಧ್ಯಮ ಕ್ರಮಾಂಕದಲ್ಲಿ ಸೂರ್ಯಕುಮಾರ್ ಯಾದವ್ 31 ರನ್ ಸಿಡಿಸಿದರೆ, ಶಿವಂ ದುಬೆ 28 ರನ್ ಸಿಡಿಸಿದರು.
ಕೊನೆಯಲ್ಲಿ ಸ್ಪೋಟಕ ಬ್ಯಾಟಿಂಗ್ ನಡೆಸಿದ ಹಾರ್ದಿಕ್ ಜವಾಬ್ದಾರಿಯುತ ಬ್ಯಾಟಿಂಗ್ ‌ನಡೆಸುವ ಮೂಲಕ ತಂಡದ ಮೊತ್ತವನ್ನು ಇನ್ನೂರರ ಗಡಿ ದಾಟಿಸುವಲ್ಲಿ ಯಶಸ್ವಿಯಾದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!