ಬೆಂಗಳೂರಿನಲ್ಲಿ ಹಿಟ್ & ರನ್: ಅಪಘಾತದಲ್ಲಿ ಇಬ್ಬರು ಮಹಿಳೆಯರು ಸಾವು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬೆಂಗಳೂರಿನ ಕೆ.ಆರ್. ಪುರಂನಲ್ಲಿ ಇನೋವಾ ಕಾರ್‌ಒಂದು ಆಟೋಗೆ ಡಿಕ್ಕಿ ಹೊಡೆದಿದ್ದು, ಇಬ್ಬರು ಮಹಿಳೆಯರು ಮೃತಪಟ್ಟಿದ್ದಾರೆ.

ಆಟೋ ಚಾಲಕ ಖಾಲಿದ್, ಪತ್ನಿ ತಾಸೀನಾ, ಸಹೋದರಿ ಫಾಝಿಲಾ ಹಾಗೂ ಇಬ್ಬರು ಮಕ್ಕಳು ಆಟೋದಲ್ಲಿ ಇದ್ದರು. ಈ ವೇಳೆ ಹಿಂದಿನಿಂದ ವೇಗವಾಗಿ ಬಂದ ಇನೋವಾ ಆಟೋಗೆ ಡಿಕ್ಕಿ ಹೊಡೆದಿದ್ದು, ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕಾರ್ ಪರಾರಿಯಾಗಿದ್ದು, ಕಾರಿಗಾಗಿ ಹುಡುಕಾಟ ನಡೆಸಲಾಗಿದೆ. ಕೆ.ಆರ್.ಪುರಂ ಸಂಚಾರಿ ಠಾಣೆಯಲ್ಲಿ ದೂರು ದಾಖಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!