Wednesday, November 5, 2025

ದೊಡ್ಡಬಳ್ಳಾಪುರದಲ್ಲಿ ಹಿಟ್‌ & ರನ್​​ : ಸ್ಥಳದಲ್ಲೇ ಇಬ್ಬರು ಯುವಕರ ದುರ್ಮರಣ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಹಿಟ್​ & ರನ್​​ಗೆ ಇಬ್ಬರು ಬೈಕ್​ ಸವಾರರು ಬಲಿಯಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ರಾಮಯ್ಯನಪಾಳ್ಯ ಬಳಿ ನಡೆದಿದೆ. ಅಪರಿಚಿತ ವಾಹನ ಡಿಕ್ಕಿಯಾದ ಪರಿಣಾಮ ಬೈಕ್​ನಲ್ಲಿದ್ದ ಇಬ್ಬರು ಯುವಕರ ಸಾವನ್ನಪ್ಪಿದ್ದಾರೆ.

ತೂಬಗೆರೆ ನಿವಾಸಿ ನಂದನ್ ಕುಮಾರ್(22) ಮತ್ತು ದೊಡ್ಡತಿಮ್ಮನಹಳ್ಳಿಯ ರವಿಕುಮಾರ್(24) ಮೃತ ಯುವಕರಾಗಿದ್ದು, ಮೃತರು ದೊಡ್ಡಬಳ್ಳಾಪುರ ನಗರದ ಎಲ್&ಟಿ ಕಂಪನಿ ಸಿಬ್ಬಂದಿ ಎಂಬುದು ಗೊತ್ತಾಗಿದೆ.

ಬೈಕ್​ಗೆ ಹಿಂದಿನಿಂದ ವೇಗವಾಗಿ ಬಂದ ಅಪರಿಚಿತ ವಾಹನ ಡಿಕ್ಕಿಯಾಗಿದ್ದು, ಅಪಘಾತದ ತೀವ್ರತೆಗೆ ಇಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅಪಘಾತದ ನಂತರ ವಾಹನ ಸಮೇತ ಚಾಲಕ ಎಸ್ಕೇಪ್‌ ಆಗಿದ್ದು, ಸ್ಥಳಕ್ಕೆ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿದ್ದಾರೆ.

error: Content is protected !!