WORLDCUP | ಸಿಕ್ಸರ್‌ಗಳಿಂದಲೇ ದಾಖಲೆ ನಿರ್ಮಿಸಿದ ಹಿಟ್‌ಮ್ಯಾನ್ ರೋಹಿತ್ ಶರ್ಮಾ

ಹೊಸದಿಗಂತ ಡಿಜಿಟಲ್ ಡೆಸ್ಕ್:

ನ್ಯೂಜಿಲೆಂಡ್ ವಿರುದ್ಧ ನಡೆಯುತ್ತಿರುವ ವಿಶ್ವಕಪ್ ಸೆಮಿಫೈನಲ್ ಪಂದ್ಯದಲ್ಲಿ ಕ್ಯಾಪ್ಟನ್ ರೋಹಿತ್ ಶರ್ಮಾ ವಿಶ್ವದಾಖಲೆ ನಿರ್ಮಿಸಿದ್ದಾರೆ.

ವಿಶ್ವಕಪ್ ಟೂರ್ನಿಯಲ್ಲಿ 29 ಬಾಲ್‌ಗಳಲ್ಲಿ 47 ರನ್ ಸಿಡಿಸಿದ್ದು, ನಾಲ್ಕು ಬೌಂಡರಿ ಹಾಗೂ ನಾಲ್ಕು ಸಿಕ್ಸ್ ಸಿಡಿಸಿ ದಾಖಲೆ ನಿರ್ಮಿಸಿದ್ದಾರೆ. ವಿಶ್ವಕಪ್ ಟೂರ್ನಿಯಲ್ಲೇ ಅತಿಹೆಚ್ಚಿ ಸಿಕ್ಸ್ ಬಾರಿಸಿದ ವಿಶ್ವದ ಮೊದಲ ಆಟಗಾರ ಎನ್ನುವ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ಪಂದ್ಯದ ಆರಂಭದಿಂದಲೂ ಅಬ್ಬರದ ಬ್ಯಾಟಿಂಗ್ ಮಾಡಿದ ರೋಹಿತ್ ಅಲ್ಪ ಇನ್ನಿಂಗ್ಸ್‌ನಲ್ಲಿಯೇ ಬೌಂಡರಿ ಹಾಗೂ ನಾಲ್ಕು ಸಿಕ್ಸ್ ಸಿಡಿಸಿದ್ದಾರೆ. ಈ ಮೂಲಕ ಏಕದಿನ ವಿಶ್ವಕಪ್ ಇತಿಹಾಸದಲ್ಲಿ ಅತಿ ಹೆಚ್ಚು ಸಿಕ್ಸರ್ ಸಿಡಿಸಿದ ಆಟಗಾರರ ಪೈಕಿ ಕ್ರಿಸ್ ಗೇಲ್ ದಾಖಲೆ ಮುರಿದು ಮೊದಲ ಸ್ಥಾನಕ್ಕೆ ರೋಹಿತ್ ಆಗಮಿಸಿದ್ದಾರೆ.

ವಿಶ್ವಕಪ್‌ನಲ್ಲಿ ಕ್ರಿಸ್‌ಗೇಲ್ ಈವರೆಗೂ 49 ಸಿಕ್ಸ್ ಬಾರಿಸಿದ್ದರು, ಇದೀಗ ಹಿಟ್‌ಮ್ಯಾನ್ ರೋಹಿತ್ 50 ಸಿಕ್ಸ್ ಬಾರಿ ಗೇಲ್ ದಾಖಲೆಯನ್ನು ಮುರಿದಿದ್ದಾರೆ.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!