HMPV | ಅಸ್ಸಾಂಗೂ ಕಾಲಿಟ್ಟ ವೈರಸ್: 10 ತಿಂಗಳ ಮಗುವಿನಲ್ಲಿ ಸೋಂಕು ಪತ್ತೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಚೀನಾದ ಹ್ಯೂಮನ್ ಮೆಟಾನ್ಯೂಮೋ ವೈರಸ್ (HMPV) ಅಸ್ಸಾಂನ 10 ತಿಂಗಳ ಮಗುವಿನಲ್ಲಿ ಪತ್ತೆಯಾಗಿದೆ.

ಮಗುವಿನ ಆರೋಗ್ಯ ಸ್ಥಿತಿ ಸ್ಥಿರವಾಗಿದ್ದು, ದಿಬ್ರುಗಢ್‌ನಲ್ಲಿರುವ ಅಸ್ಸಾಂ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ (AMCH) ಚಿಕಿತ್ಸೆ ನೀಡಲಾಗುತ್ತಿದೆ.

ಕಳೆದ 4 ದಿನಗಳ ಹಿಂದೆಯಷ್ಟೇ ಶೀತ ಜ್ವರದಿಂದ ಬಳಲುತ್ತಿದ್ದ ಮಗುವನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ರೋಗ ಲಕ್ಷಣಗಳನ್ನು ಪರಿಗಣಿಸಿ ಪರೀಕ್ಷೆಗೆ ಒಳಪಡಿಸಿದ ನಂತರ ಮಗುವಿನಲ್ಲಿ ಹೆಚ್‌ಎಂಪಿವಿ ಸೋಂಕು ಇರೋದು ದೃಢವಾಗಿದೆ ಎಂದು AMCH ಸೂಪರಿಂಟೆಂಡೆಂಟ್ ಧೃಬಜ್ಯೋತಿ ಭುಯಾನ್ ಹೇಳಿದ್ದಾರೆ.

 

- Advertisement - Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!