ಹೊಸದಿಗಂತ ಡಿಜಿಟಲ್ ಡೆಸ್ಕ್:
ಚೀನಾವನ್ನು ಬೆಚ್ಚಿಬೀಳಿಸಿರುವ ಹ್ಯೂಮನ್ ಮೆಟಾನ್ಯುಮೋ ವೈರಸ್ ಭಾರತಕ್ಕೂ ಕಾಲಿಟ್ಟಿದೆ. ಅದರಲ್ಲಿಯೂ ಬೆಂಗಳೂರಿನಲ್ಲಿಯೇ ಎರಡೂ ಪ್ರಕರಣಗಳು ದಾಖಲಾಗಿದೆ.
ಬೆಂಗಳೂರಿನ ಬ್ಯಾಪ್ಟಿಸ್ಟ್ ಆಸ್ಪತ್ರೆಯಲ್ಲಿ ಜ್ವರದಿಂದ ಅಡ್ಮಿಟ್ ಆಗಿದ್ದ ಎಂಟು ತಿಂಗಳ ಮಗುವಿನಲ್ಲಿ ವೈರಸ್ ಕಾಣಿಸಿತ್ತು. ಇದೀಗ ಮೂರು ತಿಂಗಳ ಮಗುವಿನಲ್ಲೂ ವೈರಸ್ ಪತ್ತೆಯಾಗಿದೆ. 3 ತಿಂಗಳ ಮಗು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದರೆ 8 ತಿಂಗಳ ಮಗು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಚೇತರಿಕೆ ಕಾಣುತ್ತಿದೆ.
ಈ ಸಂಬಂಧ ಹೇಳಿಕೆ ಬಿಡುಗಡೆ ಮಾಡಿದ ಐಸಿಎಂಆರ್, ದೇಶದಾದ್ಯಂತ ಉಸಿರಾಟದ ಕಾಯಿಲೆಗಳನ್ನು ಮೇಲ್ವಿಚಾರಣೆ ಮಾಡಲು ಐಸಿಎಂಆರ್ ನಡೆಸುತ್ತಿರುವ ಪ್ರಯತ್ನಗಳ ಭಾಗವಾಗಿ ಎರಡೂ ಪ್ರಕರಣಗಳನ್ನು ಗುರುತಿಸಲಾಗಿದೆ. HMPV ಭಾರತ ಸೇರಿದಂತೆ ವಿಶ್ವಾದ್ಯಂತ ಹರಡಿದ್ದು, ಹಲವು ದೇಶಗಳಲ್ಲಿ ಸೋಂಕು ಪತ್ತೆಯಾಗಿದೆ ಎಂದು ತಿಳಿಸಿದೆ.