ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದ ರಾಜಧಾನಿ ಬೆಂಗಳೂರಲ್ಲಿ ಇಬ್ಬರಿಗೆ ಹೆಚ್ ಎಂ ಪಿ ವಿ ವೈರಲ್ ದೃಢಪಟ್ಟ ಬೆನ್ನಲ್ಲೇ ಇದೀಗ ಶಿವಮೊಗ್ಗದಲ್ಲಿ ಆರು ಮಕ್ಕಳಲ್ಲಿ HMPV ಸೋಂಕು ಪತ್ತೆಯಾಗಿದೆ.
ನವಂಬರ್ ತಿಂಗಳಿನಲ್ಲಿ 1 ವರ್ಷ ಹಾಗೂ 2 ವರ್ಷ ವಯಸ್ಸಿನ ಮಕ್ಕಳಲ್ಲಿ ವೈರಸ್ ಕಾಣಿಸಿಕೊಂಡಿದೆ. ಆದ್ರೆ, ಇದೀಗ ಮಕ್ಕಳು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ಮನೆಗೆ ತೆರಳಿದ್ದಾರೆ ಎಂದು ಖಾಸಗಿ ಆಸ್ಪತ್ರೆ ಆಡಳಿತ ಮಂಡಳಿ, ಜಿಲ್ಲಾಡಳಿತಕ್ಕೆ ಮಾಹಿತಿ ನೀಡಿದೆ.
ಕೊರೋನಾ ಶಂಕೆಯಲ್ಲಿ ಸ್ವಾಬ್ ತೆಗೆದು ಟೆಸ್ಟ್ ಮಾಡಿಸಲಾಗಿತ್ತು. ನಂತರ ಲ್ಯಾಬ್ ವರದಿಯಲ್ಲಿ ಹ್ಯೂಮನ್ ಮೆಟಾನ್ಯುಮೊವೈರಸ್ ಎನ್ನುವುದು ದೃಢಪಟ್ಟಿತ್ತು. ಉಸಿರಾಟದ ಸೋಂಕಿನ ಹಿನ್ನೆಲೆಯಲ್ಲಿ ಚಿಕಿತ್ಸೆ ನೀಡಿ ಮಕ್ಕಳನ್ನು ಗುಣಪಡಿಸಲಾಗಿದೆ ಎಂದು ಡಾ. ಧನಂಜಯ್ ಸರ್ಜಿ ಮಾಹಿತಿ ನೀಡಿದ್ದಾರೆ.
ಶಿವಮೊಗ್ಗದಲ್ಲಿ ಎಂಎಲ್ ಸಿ ಹಾಗು ಮಕ್ಕಳ ವೈದ್ಯ ಡಾ.ಧನಂಜಯ ಸರ್ಜಿ ಪ್ರತಿಕ್ರಿಯಿಸಿದ್ದು, ಎಚ್ ಎಂಪಿ ವೈರಸ್ ಬಗ್ಗೆ ವರಿ ಮಾಡಿಕೊಳ್ಳುವ ಅವಶ್ಯಕತೆ ಇಲ್ಲ. ಇದು ಕಾಮನ್ ಆಗಿ ಬಂದು ಹೋಗುವ ವೈರಸ್. ನಮ್ಮ ಆಸ್ಪತ್ರೆಗೆ ದಾಖಲಾಗಿದ್ದ ಮಕ್ಕಳ ಟೆಸ್ಟ್ ಗೆ ಕಳುಹಿಸಿದ್ದೆವು. ಐದು ಮಕ್ಕಳಿಗೆ ಬಂದಿತ್ತು. ಸೆಪ್ಟೆಂಬರ್ ಅಕ್ಟೋಬರ್ ತಿಂಗಳಲ್ಲಿ ಬಂದಿತ್ತು. ಯಾವುದೇ ತೊಂದರೆ ಮಾಡುವುದಿಲ್ಲ. ಎಲ್ಲಾ ಮಕ್ಕಳು ಗುಣಮುಖರಾಗಿ ಡಿಸ್ಚಾರ್ಜ್ ಆಗಿ ಹೋಗಿದ್ದಾರೆ ಎಂದು ಸ್ಪಷ್ಟಪಡಿಸಿದರು.
ಜ್ವರ, ಶೀತ ಹಾಗೂ ಕೆಮ್ಮು ಸಮಸ್ಯೆಯಿಂದ ನಾಗ್ಪುರದ ಖಾಸಗಿ ಆಸ್ಪತ್ರೆಗೆ ಮಂಗಳವಾರ ಇಬ್ಬರು ಮಕ್ಕಳು ದಾಖಲಾಗಿದ್ದರು. ಪರೀಕ್ಷಿಸಿದಾಗ HMPV ವೈರಸ್ ಪತ್ತೆಯಾಗಿತ್ತು. ಆದರೆ ಮಾದರಿ ಸಂಗ್ರಹಿಸಿ ಅದರ ಫಲಿತಾಂಶ ಬರುವ ವೇಳೆ ಅಂದರೆ ಇಂದು(ಜ.07) ಇಬ್ಬರು ಮಕ್ಕಳು ಗುಣಮುಖರಾಗಿದ್ದಾರೆ.