ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜಧಾನಿ ಬೆಂಗಳೂರಿನಲ್ಲಿರುವ ಖಾಸಗಿ ಆಸ್ಪತ್ರೆಯೊಂದರಲ್ಲಿ ದಾಖಲಾಗಿರುವ 8 ತಿಂಗಳ ಮಗುವಿನಲ್ಲಿ ಹ್ಯೂಮನ್ ಮೆಟಾನ್ಯೂಮೋ ( HMPV) ವೈರಸ್ ಪತ್ತೆಯಾಗಿದೆ.
ಖಾಸಗಿ ಆಸ್ಪತ್ರೆಯಾದ ಬ್ಯಾಪ್ಟಿಸ್ಟ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಗುವಿನಲ್ಲಿ ವೈರಸ್ ಪತ್ತೆಯಾಗಿದೆ. ಮಗು ಹಾಗೂ ಪೋಷಕರಿಗೆ ಯಾವುದೇ ಟ್ರಾವೆಲ್ ಹಿಸ್ಟರಿ ಇಲ್ಲ. ಮಗುವಿಗೆ ಜ್ವರ ಬಂದ ಹಿನ್ನೆಲೆಯಲ್ಲಿ ನಗರದ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು. ಈ ವೇಳೆ ರಕ್ತ ಪರೀಕ್ಷೆ ಮಾಡಿಸಿದಾಗ ಹೆಚ್‌ಎಂವಿಪಿ ವೈರಸ್ ಇರುವುದು ದೃಢಪಟ್ಟಿದೆ.
ಎಚ್ಎಂಪಿವಿ ವೈರಸ್ ಭಾರತದಲ್ಲೂ ಇದೆ. ಆದರೆ, ಅದು ಮ್ಯೂಟೆಷನ್ ಆಗಿದೆಯಾ ಎಂಬ ಬಗ್ಗೆ ಇನ್ನೂ ಸ್ಪಷ್ಟನೆ ಇಲ್ಲ. ನಮಗೆ ಚೀನಾದಲ್ಲಿ ಮ್ಯುಟೇಟ್ ಆಗಿರುವ ವೈರಸ್ ಹೇಗಿದೆ ಎಂದು ತಿಳಿದಿಲ್ಲ. ಹೀಗಾಗಿ ಇಲ್ಲಿ ಪತ್ತೆಯಾಗಿರುವುದು ಸಾಮಾನ್ಯ HMPV ವೈರಸ್ಸೇ ಅಥವಾ ಚೀನಾದ ತಳಿಯಾ ಎಂಬ ಗೊಂದಲ ಇದೆ. ಭಾರತದಲ್ಲೂ ಸಾಮಾನ್ಯ HMPV ವೈರಸ್ ಶೇ 0.78 ರಷ್ಟು ಕಾಣಿಸುತ್ತದೆ ಎಂದು ಆರೋಗ್ಯ ಇಲಾಖೆ ಪ್ರಧಾನ ಕಾರ್ಯದರ್ಶಿ ಹರ್ಷಗುಪ್ತ ಮಾಹಿತಿ ನೀಡಿದ್ದಾರೆ.