HMPV | ತಮಿಳುನಾಡಿನಲ್ಲೂ ವೈರಸ್ ಪತ್ತೆ: ಚೆನ್ನೈನಲ್ಲಿ ಇಬ್ಬರು ಮಕ್ಕಳಿಗೆ ಪಾಸಿಟಿವ್

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಭಾರತದಲ್ಲೂ HMPV ವೈರಸ್ ವ್ಯಾಪಕವಾಗಿ ಹರಡುತ್ತಿದ್ದು, ಕರ್ನಾಟಕ, ಪಶ್ಚಿಮ ಬಂಗಾಳ ಮತ್ತು ಗುಜರಾತ್ ನಂತರ ಇದೀಗ ತಮಿಳುನಾಡಿನಲ್ಲೂ ಹೊಸ ವೈರಸ್ ಪತ್ತೆಯಾಗಿದೆ.

ಚೆನ್ನೈನಲ್ಲಿ ಇಬ್ಬರು ಮಕ್ಕಳಿಗೆ ಎಚ್ಎಂಪಿವಿ ಪಾಸಿಟಿವ್ ದೃಢಪಟ್ಟಿದ್ದು, ಪ್ರಸ್ತುತ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಆರೋಗ್ಯ ಅಧಿಕಾರಿಯೊಬ್ಬರು ಸೋಮವಾರ ತಿಳಿಸಿದ್ದಾರೆ.

ಈ ಎರಡು ಪ್ರಕರಣಗಳು ನಗರದಲ್ಲಿ ಎರಡು ಆಸ್ಪತ್ರೆಗಳಲ್ಲಿ ವರದಿಯಾಗಿದ್ದು, ಇದರೊಂದಿಗೆ ದೇಶದಲ್ಲಿ ಸೋಂಕಿನ ಸಂಖ್ಯೆ 6ಕ್ಕೆ ಏರಿಕೆಯಾಗಿದೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!