ಹೊಸದಿಗಂತ ಡಿಜಿಟಲ್ ಡೆಸ್ಕ್:
ದೆಹಲಿಯಿಂದ ಶ್ರೀನಗರಕ್ಕೆ ಪ್ರಯಾಣಿಸುತ್ತಿದ್ದ ವಿಸ್ತಾರ ವಿಮಾನ(Vistara Flight)ಕ್ಕೆ ಹುಸಿಬಾಂಬ್ ಕರೆ ಬಂದ ಹಿನ್ನೆಲೆ ತುರ್ತು ಲ್ಯಾಂಡಿಂಗ್(Emergency Landing) ಮಾಡಲಾಗಿದೆ.
ಒಂದು ಪುಟ್ಟ ಮಗು ಸೇರಿದಂತೆ ಬರೋಬ್ಬರಿ 177 ಪ್ರಯಾಣಿಕರು ವಿಮಾನದಲ್ಲಿದ್ದರು ಎನ್ನಲಾಗಿದ್ದು, ಎಲ್ಲರೂ ಸುರಕ್ಷಿತರಾಗಿದ್ದಾರೆ.
ಶುಕ್ರವಾರ ಬೆಳಗ್ಗೆ 12:10ಗೆ ದಿಲ್ಲಿ ವಿಮಾನ ನಿಲ್ದಾಣದಿಂದ ವಿಸ್ತಾರ UK611 ವಿಮಾನಕ್ಕೆ ಬಾಂಬ್ ಬೆದರಿಕೆ ಬಂದಿತ್ತು. ಈ ಕರೆ ಶ್ರೀನಗರದ ಏರ್ ಟ್ರಾಫಿಕ್ ಕಂಟ್ರೋಲ್(ATC)ಗೆ ಬಂದಿದ್ದ ಹಿನ್ನೆಲೆ ತಕ್ಷಣ ಆ ವಿಮಾನವನ್ನು ಪ್ರತ್ಯೇಕವಾಗಿ ಲ್ಯಾಂಡಿಂಗ್ ಮಾಡಿಸಲಾಗಿತ್ತು. ಎಲ್ಲಾ ಪ್ರಯಾಣಿಕರನ್ನು ಸುರಕ್ಷಿತವಾಗಿ ವಿಮಾನದಿಂದ ಕೆಳಗಿಸಲಾಗಿದ್ದು, ಏರ್ಪೋರ್ಟ್ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ.
ಸ್ಥಳಕ್ಕೆ ಬಾಂಬ್ ನಿಷ್ಕ್ರೀಯ ದಳವೂ ದೌಡಾಯಿಸಿ ಪರಿಶೀಲನೆ ನಡೆಸಿದೆ. ಯಾವುದೇ ಬಾಂಬ್, ಸ್ಫೋಟಕ ವಸ್ತುಗಳು ಪರಿಶೀಲನೆ ವೇಳೆ ಪತ್ತೆ ಆಗಿಲ್ಲ.
ನಿನ್ನೆಯಷ್ಟೇ ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣಕ್ಕೂ ಬಾಂಬ್ ಬೆದರಿಕೆ ಸಂದೇಶ ಬಂದಿದ್ದರಿಂದ ಸ್ಥಳದಲ್ಲಿ ಆತಂಕದ ವಾತಾವರಣ ಸೃಷ್ಟಿಯಾಗಿತ್ತು.