Thursday, September 4, 2025

Hockey Asia Cup: ಸೂಪರ್ 4 ಸುತ್ತಿನಲ್ಲಿ ಮಲೇಷ್ಯಾ ವಿರುದ್ಧ ಭಾರತಕ್ಕೆ ಗೆಲುವಿನ ಸಂಭ್ರಮ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಪುರುಷರ ಹಾಕಿ ಏಷ್ಯಾಕಪ್​ನ ಸೂಪರ್ 4 ಸುತ್ತಿನಲ್ಲಿ ಭಾರತ ತಂಡ ಮೊದಲ ಗೆಲುವು ದಾಖಲಿಸಿದೆ.

ಈ ಸುತ್ತಿನಲ್ಲಿ ತನ್ನ ಮೊದಲ ಪಂದ್ಯವನ್ನು ಕೊರಿಯಾ ವಿರುದ್ಧ ಆಡಿದ್ದ ಭಾರತ ತಂಡ ಈ ಪಂದ್ಯವನ್ನು 2-2 ಗೋಲುಗಳಿಂದ ಡ್ರಾ ಮಾಡಿಕೊಂಡಿತ್ತು. ಆದರೀಗ ತನ್ನ ಎರಡನೇ ಪಂದ್ಯದಲ್ಲಿ ಮಲೇಷ್ಯಾವನ್ನು 4-1 ಗೋಲುಗಳಿಂದ ಸೋಲಿಸುವ ಮೂಲಕ ಫೈನಲ್‌ಗೆ ತನ್ನ ಭರವಸೆಯನ್ನು ಜೀವಂತವಾಗಿರಿಸಿಕೊಂಡಿದೆ.

ಗುಂಪು ಹಂತದಲ್ಲಿ ಆಡಿದ ಮೂರಕ್ಕೆ ಮೂರೂ ಪಂದ್ಯಗಳನ್ನು ಗೆದ್ದು ಪಾಯಿಂಟ್ ಪಟ್ಟಿಯಲ್ಲಿ ಅಗ್ರಸ್ಥಾನವನ್ನು ಪಡೆದುಕೊಂಡು ಸೂಪರ್ 4 ಸುತ್ತಿಗೆ ಎಂಟ್ರಿಕೊಟ್ಟಿದ್ದ ಭಾರತ ತಂಡ ಇದೀಗ, ಈ ಸುತ್ತಿನ ಎರಡನೇ ಪಂದ್ಯದಲ್ಲಿ ಏಕಪಕ್ಷೀಯ ಗೆಲುವು ದಾಖಲಿಸಿದೆ.

ಇದನ್ನೂ ಓದಿ