ಬೀದರ್‌ ಜಿಲ್ಲಾಧಿಕಾರಿಯಿಂದ ಧ್ವಜಾರೋಹಣ: ಮಹನೀಯರ ತ್ಯಾಗ, ಬಲಿದಾನಗಳ ಸ್ಮರಣೆ

ಹೊಸದಿಗಂತ ವರದಿ ಬೀದರ್:‌

ಭಾರತ ದೇಶವು ಪ್ರಜಾತಂತ್ರ ಮತ್ತು ಗಣತಂತ್ರದ ಪ್ರಯೋಗಗಳನ್ನು ಯಶಸ್ವಿಯಾಗಿ ನಡೆಸಿಕೊಂಡು ಬರುತ್ತಿರುವ ಹಿನ್ನೆಲೆಯಲ್ಲಿ ನಾವು ಜನವರಿ 26ರ ಗಣರಾಜ್ಯೋತ್ಸವವನ್ನು ಪ್ರತಿ ವರ್ಷ ಸಂಭ್ರಮದಿಂದ ಆಚರಿಸುತ್ತಿದ್ದೇವೆ ಎಂದು ಜಿಲ್ಲಾಧಿಕಾರಿ ಗೋವಿಂದರೆಡ್ಡಿ ಹೇಳಿದರು.
ಗುರುವಾರ ಬೀದರ ಜಿಲ್ಲಾ ನೆಹರು ಕ್ರೀಡಾಂಗಣದಲ್ಲಿ 74ನೇ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.

ಮಹಾತ್ಮ ಗಾಂಧೀಜಿ, ನೆಹರು, ಸರ್ದಾರ ಪಟೇಲ್, ನೇತಾಜಿ ಸುಭಾಷ ಚಂದ್ರಬೋಸ, ಲಾಲ್ ಬಹಾದ್ದೂರ ಶಾಸ್ತ್ರಿ, ಬಾಲಗಂಗಾಧರ ತಿಲಕ, ಭಗತ್ ಸಿಂಗ್, ರಾಜಗುರು, ಸುಖದೇವ ರವರು ಸೇರಿದಂತೆ ಇನ್ನೂ ಅನೇಕ ಮಹನೀಯರ ತ್ಯಾಗ, ಬಲಿದಾನದಿಂದ 1947 ರ ಆಗಸ್ಟ್ 15ರಂದು ನಮ್ಮ ದೇಶ ಸ್ವಾತಂತ್ರ್ಯ ಕಂಡಿತು. ಸಂವಿಧಾನ ರಚನಾ ಸಮಿತಿ ಅಧ್ಯಕ್ಷರಾಗಿದ್ದ ಡಾ. ಬಿ.ಆರ್.ಅಂಬೇಡ್ಕರ್ ಅವರ ಅವಿರತ ಪರಿಶ್ರಮದ ಫಲವಾಗಿ 1950 ರ ಜನವರಿ 26 ರಂದು ಭಾರತದ ಆಡಳಿತಕ್ಕೆ ಕೈಗನ್ನಡಿಯಾಗಿರುವ ಭಾರತದ ಸಂವಿಧಾನವನ್ನು ಅಂಗೀಕರಿಸಲಾಯಿತು. ಈ ದಿನವನ್ನು ನಾವು ಗಣರಾಜ್ಯೋತ್ಸವ ದಿನವನ್ನಾಗಿ ಆಚರಿಸುತ್ತಾ ಬರುತ್ತಿದ್ದೇವೆ.

ಭಾರತದ ಪ್ರಜಾಪ್ರಭುತ್ವ ವ್ಯವಸ್ಥೆಯು ಇಡೀ ಜಗತ್ತಿಗೆ ಮಾದರಿಯಾಗಿದ್ದು, ಎಂತಹ ಸವಾಲುಗಳು ಬಂದರೂ ಅವುಗಳನ್ನು ಎದುರಿಸುವ ಶಕ್ತಿ ನಮ್ಮ ಪ್ರಜಾಪ್ರಭುತ್ವದ ವ್ಯವಸ್ಥೆಯ ನೆಲೆಗಟ್ಟಿನಲ್ಲಿ ಭದ್ರವಾಗಿ ನಿಂತಿದೆ. ಇದಕ್ಕೆ ಸಂವಿಧಾನದ ಅಡಿಪಾಯ ಹಾಕಿದ ಸಂವಿಧಾನ ಶಿಲ್ಪಿ, ಭಾರತ ರತ್ನ ಡಾ. ಬಿ.ಆರ್.ಅಂಬೇಡ್ಕರ್ ರವರನ್ನು ನಾವಿಂದು ನೆನೆಯಬೇಕಾಗಿದೆ ಎಂದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!