August 12, 2026
Wednesday, August 12, 2026
spot_img

ತ್ರಿವರ್ಣ ಧ್ವಜ ಹಿಡಿದು ದೇಶಭಕ್ತಿಯ ಘೋಷಣೆ: ಬೆಲೇಕೇರಿಯಲ್ಲಿ ‘ಹರ್ ಘರ್ ತಿರಂಗಾ’ ಅಭಿಯಾನ

ಹೊಸದಿಗಂತ ವರದಿ ಅಂಕೋಲಾ:

ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಯ ವತಿಯಿಂದ ತಾಲೂಕಿನ ಬೆಲೇಕೇರಿಯಲ್ಲಿ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಹರ್ ಘರ್ ತಿರಂಗಾ ಅಭಿಯಾನ ನಡೆಸಲಾಯಿತು.

ಭಾರತೀಯ ತ್ರಿವರ್ಣಧ್ವಜವನ್ನು ಕೈಯಲ್ಲಿ ಹಿಡಿದು ಭಾರತ ಮಾತೆಗೆ ಜಯಕಾರ ಕೂಗುತ್ತ ಬೆಲೇಕೇರಿಯಲ್ಲಿ ಭವ್ಯ ಮೆರವಣಿಗೆ ನಡೆಸಲಾಯಿತು.

ಇದನ್ನೂ ಓದಿ:

ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ಪ್ರತಿ ಮನೆಗಳಲ್ಲಿ ಧ್ವಜ ಹಾರಿಸುವ ಮೂಲಕ ಅಭಿಯಾನದಲ್ಲಿ ಪಾಲ್ಗೊಳ್ಳುವಂತೆ ಕರೆ ನೀಡಿದ ಎನ್.ಡಿ.ಆರ್.ಎಫ್ ಸಿಬ್ಬಂದಿಗಳು ರಾಷ್ಟ್ರಧ್ವಜ ಹಾರಿಸುವಾಗ ಧ್ವಜದ ಗೌರವಕ್ಕೆ ದಕ್ಕೆಯಾಗದಂತೆ ಪಾಲಿಸಬೇಕಾದ ನಿಯಮಗಳನ್ನು ತಿಳಿಸಿದರು.

ಬೆಲೇಕೇರಿಯ ಶಾಲಾ ವಿದ್ಯಾರ್ಥಿಗಳು,ಗ್ರಾಮಸ್ಥರು ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !