ಹೊಸದಿಗಂತ ಡಿಜಿಟಲ್ ಡೆಸ್ಕ್:
ವಿಶ್ವವಿದ್ಯಾಲಯಗಳಲ್ಲಿ ಹೋಳಿ ಆಚರಣೆಯನ್ನು ನಿಷೇಧಿಸಲಾಗಿದೆ ಎಂದು ಪಾಕಿಸ್ತಾನದ ಉನ್ನತ ಶಿಕ್ಷಣ ಆಯೋಗ (ಎಚ್ಇಸಿ)ವು ಸುತ್ತೋಲೆ ಹೊರಡಿಸಿದೆ.
ಜೂನ್ 12ರಂದು ಕ್ವೈಡ್-ಐ-ಅಜಮ್ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಹೋಳಿ ಆಚರಿಸಿದ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ಬೆನ್ನಲ್ಲೇ ಎಚ್ಇಸಿ ಸುತ್ತೋಲೆಯನ್ನು ಹೊರಡಿಸಿದೆ. ಹೋಳಿಯಂತಹ ಚಟುವಟಿಕೆಗಳು ದೇಶದ ಸಾಮಾಜಿಕ-ಸಾಂಸ್ಕೃತಿಕ ಮೌಲ್ಯಗಳಿಂದ ಜನರ ಸಂಪರ್ಕವನ್ನು ಕಡಿತಗೊಳಿಸುತ್ತದೆ ಮತ್ತು ದೇಶದ ಇಸ್ಲಾಮಿಕ್ ಗುರುತು ಮಾಸುತ್ತದೆ. ಸಾಮಾಜಿಕ ಸಾಂಸ್ಕೃತಿಕ ಮೌಲ್ಯಗಳನ್ನು ವಿದ್ಯಾರ್ಥಿಗಳು ಅನುಸರಿಸಬೇಕು, ಈ ಹಿನ್ನಲೆಯಲ್ಲಿ ಹೋಳಿ ಆಚರಣೆಯನ್ನು ನಿಷೇಧಿಸಲಾಗಿದೆ ಎಂದು ಆಯೋಗವು ಸುತ್ತೋಲೆಯಲ್ಲಿ ಉಲ್ಲೇಖಿಸಿದೆ.
ಈ ತಿಂಗಳ ಆರಂಭದಲ್ಲಿ ಇಸ್ಲಾಮಾಬಾದ್‌ನ ಕ್ವೈಡ್-ಐ-ಅಜಮ್ ವಿಶ್ವವಿದ್ಯಾಲಯದಲ್ಲಿ ಹೋಳಿ ಆಚರಣೆಯ ವಿಡಿಯೋಗಳು ವೈರಲ್ ಆಗಿದ್ದವು. ವಿಡಿಯೋಗಳಲ್ಲಿ ವಿದ್ಯಾರ್ಥಿಗಳು ಬಣ್ಣಗಳಿಂದ ಹೋಳಿ ಆಡುವುದು ಮತ್ತು ಕಾಲೇಜು ಆವರಣದಲ್ಲಿ ಸಂಭ್ರಮಾಚರಣೆಯು ಕಂಡುಬಂದಿತ್ತು.