ಅಯೋಧ್ಯೆಯಲ್ಲಿ ಹೋಳಿ ಸಂಭ್ರಮ: ರಂಗೋತ್ಸವದಲ್ಲಿ ಮಿಂದೆದ್ದ ಶ್ರೀರಾಮ ಭಕ್ತರು!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ದೇಶದಲ್ಲಿ ಇಂದು ಎಲ್ಲೆಡೆ ಹೋಳಿ ಹಬ್ಬದ ಸಂಭ್ರಮ. ಈ ಬಾರಿ ಅಯೋಧ್ಯೆಯ ರಾಮಜನ್ಮಭೂಮಿಯಲ್ಲಿ ರಂಗೋತ್ಸವವನ್ನು ಸಂಭ್ರಮದಿಂದ ಆಚರಿಸಲಾಗಿದೆ.

ಅಪಾರ ಸಂಖ್ಯೆಯಲ್ಲಿ ಭಕ್ತರು ಆಗಮಿಸಿ ಬಾಲರಾಮನ ದರುಶನ ಪಡೆದರು. ರಾಮಜನ್ಮಭೂಮಿಯಲ್ಲಿ ಭಕ್ತಿ ಗೀತೆಗಳನ್ನು ಹಾಡಿ ಸಂಭ್ರಮದಿಂದ ಹೋಳಿಯನ್ನು ಆಚರಿಸಿದರು.

ರಾಮ ಮಂದಿರದಲ್ಲಿ ಪ್ರಾಣ ಪ್ರತಿಷ್ಠಾನ ಬಳಿಕ ಮೊದಲ ‘ರಂಗಭಾರಿ ಏಕಾದಶಿ’ಯಂದು ಹನುಮಂತನಗರಿ ದೇವಸ್ಥಾನದಲ್ಲಿ ದೇವರಿಗೆ ಬಣ್ಣ ಹಚ್ಚುವ ಮೂಲಕ ಬಣ್ಣಗಳ ಹಬ್ಬ ‘ರಂಗೋತ್ಸವ’ವನ್ನು ಆಚರಿಸಲಾಯಿತು.

ಅಯೋಧ್ಯೆಯಲ್ಲಿ ಭಗವಾನ್ ಶ್ರೀ ರಾಮನಿಗೆ ಗೌರವ ಸಲ್ಲಿಸುವ ನಿಟ್ಟಿನಲ್ಲಿ ಅದ್ಧೂರಿಯಾಗಿ ಹೋಳಿ ಆಚರಣೆ ಮಾಡಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!