ರಾಜನಾಥ್​ ಸಿಂಗ್ ಮನೆಯಲ್ಲಿ ಹೋಳಿ ಹಬ್ಬ: ಸಚಿವರೊಂದಿಗೆ ಹಬ್ಬಾಚರಿಸಿದ ಯುಎಸ್​ ಅಧಿಕಾರಿಗಳು!

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ದೇಶದ ಜನತೆ ಹೋಳಿ ಹಬ್ಬದ ಬಣ್ಣದೋಕುಳಿಯಲ್ಲಿ ಮಿಂದೆದ್ದಿದ್ದಾರೆ. ಭಾರತದ ರಕ್ಷಣಾ ಸಚಿವ ರಾಜನಾಥ್​ ಸಿಂಗ್ ಅವರ ಮನೆಯಲ್ಲೂ ಬಣ್ಣದ ಹಬ್ಬವನ್ನು ಜೋರಾಗಿಯೇ ಆಚರಿಸಲಾಗಿದೆ. ವಿಶೇಷವೆಂದರೆ ಈ ವಿಶೇಷ ಸಂದರ್ಭ ವಿದೇಶಿ ಗಣ್ಯರು ಕೂಡ ಭಾಗಿಯಾಗಿದ್ದಾರೆ.

ಅಮೆರಿಕಾದ ವಾಣಿಜ್ಯ ಕಾರ್ಯದರ್ಶಿ ಗಿನಾ ರೈಮೊಂಡೋ ಡ್ರಮ್ ಕೇಂದ್ರ ಸಚಿವ ರಾಜನಾಥ್​ ಸಿಂಗ್ ಅವರ ಅಧಿಕೃತ ನಿವಾಸಕ್ಕೆ ಆಗಮಿಸಿ ಹೋಳಿ ಆಚರಣೆಯಲ್ಲಿ ಭಾಗಿಯಾಗಿದ್ದಲ್ಲದೆ, ಸಚಿವರ ಜೊತೆಗೆ ನೃತ್ಯ ಮಾಡಿದ್ದು ಇಂಟರ್​ ನೆಟ್​ನಲ್ಲಿ ಗಮನ ಸೆಳೆಯುತ್ತಿದೆ.

ಹೋಳಿ ಸಂದರ್ಭದಲ್ಲಿ ನಾನು ಇಲ್ಲಿಗೆ ಬಂದಿರುವುದಕ್ಕೆ ತುಂಬಾ ಗೌರವ ಅನ್ನಿಸುತ್ತಿದೆ. ನನಗೆ ಇಂತಹ ಆತಿಥ್ಯ ನೀಡಿದ್ದಕ್ಕಾಗಿ ಸಚಿವರಿಗೆ ಧನ್ಯವಾದ ಹೇಳಲು ಬಯಸುತ್ತೇನೆ. ಇದೇ ಮೊದಲ ಬಾರಿಗೆ ಹೋಳಿ ಭಾಗವಾಗಿದ್ದೇನೆ. ಅದರ ಭಾಗವಾಗಿದ್ದಕ್ಕೆ ತುಂಬಾ ಖುಷಿಯಿದೆ ಎಂದು ರೈಮೊಂಡೋ ತಿಳಿಸಿದ್ದಾರೆ.

ಈ ಸಂದರ್ಭ ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕೆ, ಗ್ರಾಹಕ ವ್ಯವಹಾರಗಳ ಸಚಿವ ಪಿಯೂಷ್ ಗೋಯಲ್, ಕೇಂದ್ರ ಕ್ರೀಡಾ, ಯುವ ವ್ಯವಹಾರಗಳು ಮತ್ತು ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಅನುರಾಗ್ ಠಾಕೂರ್ ಮತ್ತು ಬಿಜೆಪಿ ಸಂಸದ ಮನೋಜ್ ತಿವಾರಿ, ವಿದೇಶಾಂಗ ಸಚಿವ ಎಸ್ ಜೈಶಂಕರ್ ಮತ್ತು ಕೇಂದ್ರ ಕಾನೂನು ಸಚಿವ ಕಿರಣ್ ರಿಜಿಜು ಹೋಳಿ ಆಡಿ ಸಂಭ್ರಮಿಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!