Monday, December 11, 2023

Latest Posts

ನಾಳೆ ಬೆಂಗಳೂರಿನ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ: ಜಿಲ್ಲಾಧಿಕಾರಿ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ನಗರದ ಎಲ್ಲಾ ಶಾಲಾ ಕಾಲೇಜುಗಳಿಗೆ ನಾಳೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಕೆ.ಎ.ದಯಾನಂದ್ ಅವರು ಆದೇಶ ಹೊರಡಿಸಿದ್ದಾರೆ.

ತಮಿಳುನಾಡಿಗೆ ಕಾವೇರಿ ನೀರು ಬಿಡುವುದನ್ನು ವಿರೋಧಿಸಿ ನಾಳೆ ಕರ್ನಾಟಕ ಬಂದ್ ನಡೆಯಲಿದೆ. ನಾಳಿ‌ನ ಬಂದ್ ಗೆ ನೂರಾರು ಸಂಘಟನೆಗಳು ಬೆಂಬಲ ನೀಡಿವೆ.ರಾಜ್ಯಾದ್ಯಂತ ಸಾರಿಗೆ ವಾಹನ ವ್ಯವಸ್ಥೆ ಅಸ್ತವ್ಯಸ್ತವಾಗಲಿದೆ.

ಸೆಪ್ಟೆಂಬರ್ 29 ರಂದು ಮುಷ್ಕರ ಹಿಂತೆಗೆದುಕೊಳ್ಳುವಂತೆ ಸರ್ಕಾರ ಮನವಿ ಮಾಡಿದರೂ 100 ಕ್ಕೂ ಹೆಚ್ಚು ಸಂಘಟನೆಗಳು ಭಾಗವಹಿಸಲಿವೆ.

ಇನ್ನೂ ಕನ್ನಡ ಚಿತ್ರರಂಗ ಕೂಡ ಕರ್ನಾಟಕ ಬಂದ್ ಗೆ ಬೆಂಬಲ ನೀಡಿದೆ‌. ನಾಳೆ ಶೂಟಿಂಗ್ ನಿಲ್ಲಿಸಿ ತಮ್ಮ ಬೆಂಬಲ ವ್ಯಕ್ತಪಡಿಸಿದೆ. ನಾಳೆ ಶಿವರಾಜ್ ಕುಮಾರ್ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನಡೆಯಲಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!