Thursday, August 18, 2022

Latest Posts

ನಾಳೆಯಿಂದ ಮೂರು ದಿನ ಎಲ್ಲಾ ಶಾಲಾ,ಕಾಲೇಜುಗಳಿಗೆ ರಜೆ ಘೋಷಣೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ತೆಲಂಗಾಣ ರಾಜ್ಯದಲ್ಲಿ ಕಳೆದ ಕೆಲ ದಿನಗಳಿಂದ ಭಾರೀ ಮಳೆಯಾಗುತ್ತಿದ್ದು, ಈ ಹಿನ್ನೆಲೆ ನಾಳೆಯಿಂದ ಮೂರು ದಿನಗಳ ಎಲ್ಲಾ ಶಾಲಾ-ಕಾಲೇಜುಗಳಿಗೆ ರಜೆಯನ್ನು ಘೋಷಿಸಿ, ಸರ್ಕಾರ ಆದೇಶಿಸಿದೆ.
ತೆಲಂಗಾಣ ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್ ಅವರು ರಾಜ್ಯದ ಪರಿಸ್ಥಿತಿಯನ್ನು ಪರಿಶೀಲಿಸಲು ಸಚಿವರು ಮತ್ತು ಅಧಿಕಾರಿಗಳೊಂದಿಗೆ ಉನ್ನತ ಮಟ್ಟದ ಸಭೆಯ ನಂತರ ಈ ನಿರ್ಧಾರವನ್ನು ತೆಗೆದುಕೊಂಡಿದ್ದಾರೆ.
ಜಯಶಂಕರ್ ಭೂಪಾಲಪಲ್ಲಿ, ಮಂಚೇರಿಯಲ್, ನಿರ್ಮಲ್, ನಿಜಾಮಾಬಾದ್, ಪೆದ್ದಪಲ್ಲೆಯಲ್ಲಿ ಭಾರಿ ಮಳೆಯಾಗಿದ್ದು, ಅದಿಲಾಬಾದ್, ಜಗತ್ಯಲ್, ಜಯಶಂಕರ್ ಭೂಪಾಲಪಲ್ಲಿ, ಮುಲುಗು, ನಿರ್ಮಲ್ ಮತ್ತು ನಿಜಾಮಾಬಾದ್ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss

error: Content is protected !!