ಜಾರ್ಖಂಡ್‌ನಲ್ಲಿ 8 ತರಗತಿವರೆಗೆ ಇಂದಿನಿಂದ ರಜೆ ಘೋಷಣೆ, ಯಾಕೆ ಗೊತ್ತಾ?

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಜಾರ್ಖಂಡ್‌ನಲ್ಲಿ ಇಂದಿನಿಂದ ರಾಜ್ಯಾದ್ಯಂತ ಸರ್ಕಾರಿ ಮತ್ತು ಖಾಸಗಿ ಶಾಲೆಗಳ 8 ತರಗತಿವರೆಗೆ ರಜೆ ಘೋಷಣೆ ಮಾಡಲಾಗಿದೆ.

ಜಾರ್ಖಂಡ್‌ನಲ್ಲಿ ತೀವ್ರವಾದ ಬಿಸಿ ಗಾಳಿ ಬೀಸುತ್ತಿರುವ ಹಿನ್ನೆಲೆಯಲ್ಲಿ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ದೇಶದಲ್ಲಿ ಅತಿಯಾದ ಬಿಸಿಲಿನಿಂದ ಜನರು ಸಮಸ್ಯೆ ಅನುಭವಿಸುತ್ತಿದ್ದು, ಮಳೆಗಾಗಿ ಹಪಹಪಿಸುತ್ತಿದ್ದಾರೆ.

ಮುಂದಿನ ಸೂಚನೆ ಬರುವವರೆಗೂ ಇದು ಜಾರಿಯಲ್ಲಿರುವುದಾಗಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಕಾರ್ಯದರ್ಶಿ ಉಮಾ ಶಂಕರ್ ಸಿಂಗ್ ಹೊರಡಿಸಿದ ಆದೇಶದಲ್ಲಿ ತಿಳಿಸಲಾಗಿದೆ. ಸರ್ಕಾರಿ, ಖಾಸಗಿ, ಅನುದಾನಿತ ಮತ್ತು ಅನುದಾನರಹಿತ ಸೇರಿದಂತೆ ಎಲ್ಲಾ ವರ್ಗದ ಶಾಲೆಗಳಿಗೆ ಇದು ಅನ್ವಯಿಸುತ್ತದೆ. ಆದರೆ ಸರ್ಕಾರಿ, ಸರ್ಕಾರೇತರ ಅನುದಾನಿತ ಮತ್ತು ಅನುದಾನರಹಿತ ಶಾಲೆಗಳ ಶಿಕ್ಷಕರು ಮತ್ತು ಬೋಧಕೇತರ ಸಿಬ್ಬಂದಿಗೆ ಅನ್ವಯಿಸುವುದಿಲ್ಲ ಎಂದು ಅಧಿಸೂಚನೆಯಲ್ಲಿ ಹೇಳಲಾಗಿದೆ

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!