ಹೊಸದಿಗಂತ ವರದಿ, ಮಂಗಳೂರು :
ಉಡುಪಿ ಜಿಲ್ಲೆಯಾದ್ಯಂತ ಭಾರೀ ಮಳೆ ಹಿನ್ನೆಲೆಯಲ್ಲಿ ಶನಿವಾರ (ನಾಳೆ, ಜು.6) ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ ಶಾಲೆ, ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ಜಿಲ್ಲಾಧಿಕಾರಿ ಡಾ. ಕೆ .ವಿದ್ಯಾ ಕುಮಾರಿ ರಜೆ ಘೋಷಿಸಿ ಆದೇಶಿಸಿದ್ದಾರೆ.
ಈ ಮೊದಲು ಕುಂದಾಪುರ ಮತ್ತು ಬ್ರಹ್ಮಾವರ ತಾಲೂಕಿಗೆ ಮಾತ್ರ ರಜೆ ಘೋಷಿಸಲಾಗಿತ್ತು. ಇದೀಗ ಜಿಲ್ಲಾಧಿಕಾರಿ ನಿರಂತರವಾಗಿ ಮಳೆಯಾಗುತ್ತಿದ್ದು, ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಮಳೆಯ ತೀವ್ರತೆ ಹೆಚ್ಚಾಗುವುದರಿಂದ ಮುಂಜಾಗೃತ ಕ್ರಮವಾಗಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಇಂದು ಉಡುಪಿ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ, ಹಾಗೂ ಪ್ರಾಥಮಿಕ, ಪ್ರೌಢ ಶಾಲೆ ಪದವಿ ಪೂರ್ವ ಕಾಲೇಜುಗಳ ವಿದ್ಯಾರ್ಥಿಗಳಿಗೆ ರಜೆಯನ್ನು ಘೋಷಿಸಿದ್ದಾರೆ .