ಹೊಸದಿಗಂತ ವರದಿ ಮಂಗಳೂರು:
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಮಂಗಳೂರು, ಉಳ್ಳಾಲ, ಬಂಟ್ವಾಳ, ಮೂಲ್ಕಿ, ಮೂಡುಬಿದಿರೆ ತಾಲೂಕಿನ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ಇಂದು ಶನಿವಾರ (ಜು.30) ರಜೆ ಘೋಷಿಸಲಾಗಿದೆ.
ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಕಾಲೇಜುಗಳಿಗೂ ರಜೆ ನೀಡಲಾಗಿದೆ. ಉಳಿದಂತೆ ಪುತ್ತೂರು, ಸುಳ್ಯ, ಬೆಳ್ತಂಗಡಿ ವ್ಯಾಪ್ತಿಯ ತಹಶೀಲ್ದಾರರು, ಬಿಇಒ ಅಲ್ಲಿಯ ಪರಿಸ್ಥಿತಿ ನೋಡಿ ರಜೆ ನಿರ್ಧರಿಸಬಹುದು ಎಂದು ದ.ಕ. ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ತಿಳಿಸಿದ್ದಾರೆ.