ಹೊಸದಿಗಂತ ವರದಿ ವಿಜಯಪುರ:
ಜಿಲ್ಲೆಯಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಇಂದು (ಜುಲೈ 27) ಶಾಲಾ, ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ಜಿಲ್ಲೆಯಲ್ಲಿ ಕಳೆದ ವಾರದಿಂದ ಜಿಟಿಜಿಟಿ ಮಳೆ ಸುರಿಯುತ್ತಿದ್ದು, ಮೂರ್ನಾಲ್ಕು ದಿನಗಳಿಂದ ರಾತ್ರಿ, ಹಗಲು ನಿರಂತರವಾಗಿ ಮಳೆ ಸುರಿಯುತ್ತಿದೆ. ಹೀಗಾಗಿ ಅಂಗನವಾಡಿ, ಶಾಲೆ ಹಾಗೂ ಪಿಯು ಕಾಲೇಜಗಳಿಗೆ ಮಾತ್ರ ಒಂದು ದಿನ ರಜೆ ಘೋಷಿಸಲಾಗಿದೆ.
ಆದರೆ ಪದವಿ, ಎಂಜಿನಿಯರಿಂಗ್, ಮೆಡಿಕಲ್ ಸೇರಿದಂತೆ ಇತರೆ ಕಾಲೇಜು ಹಾಗೂ ವಿಶ್ವವಿದ್ಯಾಲಯಗಳಿಗೆ ರಜೆ ಇರುವುದಿಲ್ಲ. ಅವು ಎಂದಿನಂತೆ ನಡೆಯಲಿವೆ ಎಂದು ಜಿಲ್ಲಾಧಿಕಾರಿ ಟಿ. ಭೂಬಾಲನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.