September 16, 2026
Wednesday, September 16, 2026
spot_img

ಧಾರಾಕಾರ ಮಳೆ ಹಿನ್ನೆಲೆ: ನಾಳೆ ಕಾಸರಗೋಡು ಜಿಲ್ಲೆಯ ಶಿಕ್ಷಣ ಸಂಸ್ಥೆಗಳಿಗೆ ರಜೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕಾಸರಗೋಡು ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿರುವುದರಿಂದ ಮುನ್ನೆಚ್ಚರಿಕೆ ಕ್ರಮವಾಗಿ ಆ.೩ರಂದು ಜಿಲ್ಲೆಯ ವೃತ್ತಿಪರ ಕಾಲೇಜುಗಳು ಸೇರಿದಂತೆ ಎಲ್ಲಾ ಶಿಕ್ಷಣ ಸಂಸ್ಥೆಗಳಿಗೆ ಜಿಲ್ಲಾಧಿಕಾರಿ ಅರ್ಜುನ್ ಪಾಂಡ್ಯನ್ ರಜೆ ಘೋಷಿಸಿದ್ದಾರೆ.

ಕಾಲೇಜುಗಳು, ವೃತ್ತಿಪರ ಕಾಲೇಜುಗಳು, ಶಾಲೆಗಳು, ಅಂಗನವಾಡಿಗಳು, ಬೋಧನಾ ಕೇಂದ್ರಗಳು, ಐಸಿಎಸ್‌ಇ, ಸಿಬಿಎಸ್‌ಇ ಶಾಲೆಗಳು, ಕೇಂದ್ರೀಯ ವಿದ್ಯಾಲಯಗಳು ಮತ್ತು ಮದರಸಾಗಳು ಸೇರಿದಂತೆ ಧಾರ್ಮಿಕ ಶಿಕ್ಷಣ ಸಂಸ್ಥೆಗಳು ಸಹಿತ ಎಲ್ಲಾ ಶಿಕ್ಷಣ ಸಂಸ್ಥೆಗಳಿಗೆ ರಜೆ ಅನ್ವಯವಾಗುತ್ತದೆ.

ಪೂರ್ವ ನಿಗದಿಯಾಗಿದ್ದ ವಿಶ್ವವಿದ್ಯಾಲಯ/ ಸಾರ್ವಜನಿಕ ಪರೀಕ್ಷೆಗಳು ಮತ್ತು ಸಂದರ್ಶನಗಳಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !