ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಹೆಚ್ಚುತ್ತಿರುವ ವಾಯುಮಾಲಿನ್ಯದಿಂದಾಗಿ ಇಂದು ಮತ್ತು ನಾಳೆ ಶಾಲೆಗಳಿಗೆ ರಜೆಯನ್ನು ಘೋಷಿಸಲಾಗಿದೆ.
ನಗರದಲ್ಲಿ ಹೆಚ್ಚುತ್ತಿರುವ ವಾಯುಮಾಲಿನ್ಯದಿಂದಾಗಿ ದೆಹಲಿಯ ಎಲ್ಲಾ ಸರ್ಕಾರಿ ಮತ್ತು ಖಾಸಗಿ ಪ್ರಾಥಮಿಕ ಶಾಲೆಗಳಿಗೆ ಮುಂದಿನ ಎರಡು ದಿನಗಳವರೆಗೆ ರಜೆ ನೀಡಿರುವುದಾಗಿ ಗುರುವಾರ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಘೊಷಿಸಿದ್ದಾರೆ.
ಅದರ ಅನ್ವಯ ದೆಹಲಿಯಲ್ಲಿ ಇಂದು ಮತ್ತು ನಾಳೆ ಶಾಲೆಗಳಿಗೆ ರಜೆಯನ್ನು ನೀಡಲಾಗಿದೆ. ನಗರದಲ್ಲಿ ಹೆಚ್ಚುತ್ತಿರುವ ವಾಯುಮಾಲಿನ್ಯ ಮಟ್ಟದ ಕುರಿತು ಚರ್ಚಿಸಲು ದೆಹಲಿ ಪರಿಸರ ಸಚಿವ ಗೋಪಾಲ್ ರೈ ಶುಕ್ರವಾರ ಎಲ್ಲಾ ಇಲಾಖೆಗಳೊಂದಿಗೆ ಸಭೆ ನಡೆಸಲಿದ್ದಾರೆ.