ಉಡುಪಿ‌ಯಲ್ಲಿ‌ ನಾಳೆಯೂ ಶಾಲಾ,ಕಾಲೇಜಿಗಳಿಗೆ ರಜೆ: ಮುಂದುವರಿದ ವರುಣನಾರ್ಭಟ

ಹೊಸದಿಗಂತ ವರದಿ, ಉಡುಪಿ‌:

ಬುಧವಾರ ಮಧ್ಯಾಹ್ನದಿಂದ ಗುರುವಾರ ಬೆಳಿಗ್ಗೆವರೆಗೆ ಉಡುಪಿ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಿಸಿರುವುದರಿಂದ ಗುರುವಾರ (ಜುಲೈ 7 )ರಂದು ಉಡುಪಿ ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಕೂರ್ಮರಾವ್‌ ಎಂ ಆದೇಶ ಹೊರಡಿಸಿದ್ದಾರೆ.

ಕಳೆದ ದಿನಗಳಿಂದ ಜಿಲ್ಲೆಯಲ್ಲಿ ವಿಪರೀತ ಮಳೆ ಸುರಿಯುತ್ತಿರುವುದರಿಂದ ಜನ ಸಂಚಾರ ಕಷ್ಟಸಾಧ್ಯವಾಗಿದೆ. ನದಿಗಳು ಉಕ್ಕಿ ಹರಿಯುತ್ತಿದ್ದು, ತಗ್ಗು ಪ್ರದೇಶದ ಜನ ಪ್ರವಾಹ ಭೀತಿಯನ್ನು ಎದುರಿಸುತ್ತಿದ್ದಾರೆ. ಈ ಹಿನ್ನಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಜಿಲ್ಲಾಧಿಕಾರಿ ಕೂರ್ಮ ರಾವ್ ಶಾಲಾ ಕಾಲೇಜಿಗೆ ರಜೆ ಘೋಷಿಸಿ ಪ್ರಕಟನೆ ಹೊರಡಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!