ಉಕ್ರೇನ್ ಅಧ್ಯಕ್ಷ ಝೆಲೆನ್ಸ್ಕಿಗೆ ಆಸ್ಕರ್‌ ಪ್ರಶಸ್ತಿಯನ್ನು ಉಡುಗೊರೆಯಾಗಿ ನೀಡಿದ ಹಾಲಿವುಡ್‌ ನಟ

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ಹಾಲಿವುಡ್ ನಟ ಸೀನ್ ಪೆನ್ ಅವರು ತಮ್ಮ ಆಸ್ಕರ್ ಪ್ರಶಸ್ತಿಗಳಲ್ಲಿ ಒಂದನ್ನು ಉಕ್ರೇನಿಯನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಅವರಿಗೆ ಉಡುಗೊರೆಯಾಗಿ ನೀಡಿದ್ದಾರೆ. ಉಕ್ರೇನ್‌ ರಾಜಧಾನಿ ಕೀವ್‌ ಗೆ ಭೇಟಿ ನೀಡಿದ ಸಂದರ್ಭದಲ್ಲಿ ಪೆನ್‌ ಈ ಉಡುಗೊರೆ ನೀಡಿದ್ದಾರೆ ಎಂದು ಮೂಲಗಳು ವರದಿ ಮಾಡಿವೆ.

ಝೆಲೆನ್ಸ್ಕಿ ತಮ್ಮ ಟೆಲಿಗ್ರಾಮ್ ಚಾನೆಲ್‌ನಲ್ಲಿ ಪೆನ್‌ನೊಂದಿಗೆ ಅವರ ವೀಡಿಯೊವನ್ನು ಪೋಸ್ಟ್ ಮಾಡಿದ್ದಾರೆ. ಉಕ್ರೇನಿಯನ್ ಅಧ್ಯಕ್ಷ ಝೆಲೆನ್ಸ್ಕಿ ಪೆನ್ ಅವರಿಗೆ ದೇಶದ ಆರ್ಡರ್ ಆಫ್ ಮೆರಿಟ್ ಅನ್ನು ನೀಡುವುದನ್ನು ವೀಡಿಯೊ ತೋರಿಸಿದೆ.

ಅಲ್ಲದೆ, ಉಕ್ರೇನ್‌ನ ಆಂತರಿಕ ವ್ಯವಹಾರಗಳ ಸಚಿವರ ಸಲಹೆಗಾರ ಆಂಟನ್ ಗೆರಾಶ್ಚೆಂಕೊ ಅವರು ಉಕ್ರೇನಿಯನ್ ಅಧ್ಯಕ್ಷ ಝೆಲೆನ್ಸ್ಕಿ ಅಮೆರಿಕದ ನಟನನ್ನು ಭೇಟಿ ಮಾಡಿದ ವೀಡಿಯೊವನ್ನು ಪೋಸ್ಟ್ ಮಾಡಿದ್ದಾರೆ.

ವಿಶ್ವ ದರ್ಜೆಯ ನಟರಾಗಿರುವ ಪೆನ್ ತಮ್ಮ ರಾಜಕೀಯ ಚಟುವಟಿಕೆಗಳಿಗೂ ಹೆಸರುವಾಸಿಯಾಗಿದ್ದಾರೆ. ಖಾಸಗಿ ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಸಂಘರ್ಷದ ಸಂದರ್ಭದಲ್ಲಿ ಝೆಲೆನ್ಸ್ಕಿ ಅವರು ದೇಶವನ್ನು ಒಗ್ಗೂಡಿಸಿ ಮುನ್ನಡೆಸಿದ ರೀತಿಯಿಂದ ತಾವು ಪ್ರಭಾವಿತರಾಗಿರುವುದಾಗಿ ಹೇಳಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!