Saturday, February 4, 2023

Latest Posts

ತಮಿಳು ಚಿತ್ರರಂಗಕ್ಕೆ ಕಾಲಿಟ್ಟ ಹೊಂಬಾಳೆ ಸಂಸ್ಥೆ: ಕೀರ್ತಿ ಸುರೇಶ್ ನಟನೆಯ `ರಘುತಥಾ’ ಚಿತ್ರ ನಿರ್ಮಾಣ!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌

`ಕೆಜಿಎಫ್ 2′ (Kgf 2) ಮತ್ತು `ಕಾಂತಾರ’ ಎಂಬ ಎರಡು ಬ್ಲಾಕ್ ಬಸ್ಟರ್ ಚಿತ್ರಗಳನ್ನು ನೀಡಿರುವ ಹೊಂಬಾಳೆ ಸಂಸ್ಥೆಯು ಇದೀಗ ತಮಿಳು ಚಿತ್ರರಂಗಕ್ಕೆ ಕಾಲಿಟ್ಟಿದ್ದು, ಮೊದಲ ಬಾರಿಗೆ ತಮಿಳು ಚಿತ್ರವೊಂದನ್ನುನಿರ್ಮಿಸುತ್ತಿದ್ದಾರೆ.

ಚಿತ್ರದ ಹೆಸರು `ರಘುತಥಾ’ ವಾಗಿದ್ದು, ರಾಷ್ಟ್ರ ಮಟ್ಟದಲ್ಲಿ ಅತ್ಯುತ್ತಮ ನಟಿ ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡಿರುವ ಕೀರ್ತಿ ಸುರೇಶ್ ಈ ಚಿತ್ರದಲ್ಲಿ ನಟಿಸುತ್ತಿದ್ದು, ಚಿತ್ರದ ಮೊದಲ ಪೋಸ್ಟರ್ ಇಂದು ಬಿಡುಗಡೆಯಾಗಿದೆ.

ಈ ಹಿಂದೆ, `ದಿ ಫ್ಯಾಮಿಲಿ ಮ್ಯಾನ್’ ವೆಬ್ ಸೀರೀಸ್ ಜತೆಗೆ ಕೆಲವು ಚಿತ್ರಗಳಿಗೆ ಕಥೆ-ಚಿತ್ರಕಥೆ ರಚಿಸಿದ್ದ ಸುಮನ್ ಕುಮಾರ್ ಈ ಚಿತ್ರವನ್ನು ಮೊದಲ ಬಾರಿಗೆ ನಿರ್ದೇಶನ ಮಾಡುತ್ತಿದ್ದಾರೆ. ʻರಘುತಥಾʼ ಒಂದು ಮಹಿಳಾಪ್ರಧಾನ ಚಿತ್ರವಾಗಿದ್ದು, ಒಬ್ಬ ಯುವತಿಯ ಸುತ್ತ ಸುತ್ತುತ್ತದೆ.
ಈ ಚಿತ್ರದಲ್ಲಿ ಕೀರ್ತಿ ಸುರೇಶ್ ಜತೆಗೆ ಎಂ.ಎಸ್. ಭಾಸ್ಕರ್, ದೇವದರ್ಶಿನಿ, ರವೀಂದ್ರ ವಿಜಯ್, ಆನಂದ್ಸಾಮಿ, ರಾಜೇಶ್ ಬಾಲಕೃಷ್ಣನ್ ಮುಂತಾದವರು ಪ್ರಮುಖ ಪಾತ್ರಗಳ ಕಾಣಿಸಿಕೊಳ್ಳುತ್ತಿದ್ದಾರೆ. `ರಘುತಥಾ’ ಚಿತ್ರದ ಚಿತ್ರೀಕರಣ ಪ್ರಾರಂಭವಾಗಿದ್ದು, 2023ರ ಬೇಸಿಗೆ ರಜೆಯ ಸಂದರ್ಭದಲ್ಲಿ ಚಿತ್ರವು ಜಗತ್ತಿನಾದ್ಯಂತ ಬಿಡುಗಡೆಯಾಗಲಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!