ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೆಜಿಎಫ್, ಕೆಜಿಎಫ್ 2, ಕಾಂತಾರ ಸಿನಿಮಾಗಳನ್ನು ನಿರ್ಮಾಣ ಮಾಡಿ ಸೈ ಎನಿಸಿಕೊಂಡಿರುವ ಹೊಂಬಾಳೆ ಫಿಲ್ಮ್ಸ್ ಇದೀಗ ಸಲಾರ್ ಬಳಿಕ ಮತ್ತೆ ಪ್ರಭಾಸ್ ಜೊತೆ ಕೈ ಜೋಡಿಸಿದೆ. ಪ್ರಭಾಸ್ ಜೊತೆ ಬ್ಯಾಕ್ ಟು ಬ್ಯಾಕ್ 3 ಸಿನಿಮಾಗಳನ್ನು ಮಾಡೋದಾಗಿ ಹೊಂಬಾಳೆ ಸಂಸ್ಥೆ ಅಧಿಕೃತವಾಗಿ ತಿಳಿಸಿದೆ.
ಈ ಹಿಂದೆ ಪ್ರಭಾಸ್ ನಟನೆಯ ಸಲಾರ್ ಚಿತ್ರವನ್ನು ಹೊಂಬಾಳೆ ಸಂಸ್ಥೆ ನಿರ್ಮಿಸಿತ್ತು. ಇದೀಗ ಮತ್ತೆ ನಟನ ಜೊತೆ 3 ಚಿತ್ರಗಳನ್ನು ಹೊಂಬಾಳೆ ಫಿಲ್ಮ್ಸ್ ನಿರ್ಮಾಣ ಮಾಡಲಿದೆ. ಮುಂದಿನ 3 ವರ್ಷಗಳಲ್ಲಿ ಅಂದರೆ 2026, 2027, ಮತ್ತು 2028ಗೆ ಸಾಲು ಸಾಲು 3 ಸಿನಿಮಾಗಳು ರಿಲೀಸ್ ಆಗಲಿದೆ ಎಂದು ಹೊಂಬಾಳೆ ಸಂಸ್ಥೆ ಘೋಷಿಸಿದೆ.