ಜೂನಿಯರ್ ಆರ್ಟಿಸ್ಟ್ ನಿಧನಕ್ಕೆ ಸ್ಪಷ್ಟನೆ ಕೊಟ್ಟ ‘ಹೊಂಬಾಳೆ ಫಿಲ್ಮ್ಸ್’ : ಕಾಂತಾರದೊಂದಿಗೆ ಸಂಬಂಧ ಕಲ್ಪಿಸಬೇಡಿ ಅಂದಿದ್ಯಾಕೆ?

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕಾಂತಾರ 2 ಈ ಸಿನಿಮಾದ ಶೂಟಿಂಗ್ ಸಂದರ್ಭದಲ್ಲಿ ಜೂನಿಯರ್ ಆರ್ಟಿಸ್ಟ್ ಕಪಿಲ್ ಎನ್ನುವವರು ನಿಧನರಾಗಿದ್ದರು. ಈ ಘಟನೆಗೆ ಸಂಬಂಧಿಸಿದಂತೆ ನಿರ್ಮಾಣ ಸಂಸ್ಥೆ ‘ಹೊಂಬಾಳೆ ಫಿಲ್ಮ್ಸ್’ ಸ್ಪಷ್ಟನೆ ನೀಡಿದೆ.

ಸಾಮಾಜಿಕ ಮಾಧ್ಯಮ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಹೊಂಬಾಳೆ ಫಿಲ್ಸ್ಮ್, ಎಂ.ಎಫ್. ಕಪಿಲ್ ಅವರ ನಿಧನಕ್ಕೆ ನಮ್ಮ ಸಂತಾಪಗಳು. ಅವರ ಕುಟುಂಬಕ್ಕೆ ಮತ್ತು ಆತ್ಮೀಯರಿಗೆ ಈ ದುಃಖ ಭರಿಸುವ ಶಕ್ತಿ ಸಿಗಲಿ ಎಂದು ಪ್ರಾರ್ಥಿಸುತ್ತೇವೆ. ಈ ಕಷ್ಟದ ಸಮಯದಲ್ಲಿ ನಮ್ಮೆಲ್ಲರ ಸಹಾನುಭೂತಿ ಅವರೊಂದಿಗಿದೆ.

ಆ ಘಟನೆ ನಡೆದ ದಿನ ಯಾವುದೇ ಚಿತ್ರೀಕರಣ ನಿಗದಿಯಾಗಿರಲಿಲ್ಲ ಮತ್ತು ಈ ಘಟನೆ ಅವರ ವೈಯಕ್ತಿಕ ಕಾರ್ಯಕ್ರಮದಲ್ಲಿ, ಚಲನಚಿತ್ರ ಸಂಬಂಧಿತ ಚಟುವಟಿಕೆಗಳ ವ್ಯಾಪ್ತಿಯ ಹೊರಗೆ ಸಂಭವಿಸಿದೆ. ದಯವಿಟ್ಟು ಈ ಘಟನೆಯನ್ನು ಕಾಂತಾರ ಚಿತ್ರ ಅಥವಾ ಅದರ ಸಿಬ್ಬಂದಿಯೊಂದಿಗೆ ಯಾವುದೇ ಸಂಬಂಧವನ್ನು ಕಲ್ಪಿಸಬಾರದು ಎಂದು ನಾವು ವಿನಂತಿಸುತ್ತೇವೆ ಎಕ್ಸ್ ನಲ್ಲಿ ‘ಹೊಂಬಾಳೆ ಫಿಲ್ಸ್ಮ್’ ಪೋಸ್ಟ್ ಮಾಡಿದೆ.

ಮೇ 6ರಂದು ಕಪಿಲ್ ನಿಧನರಾದರು. ಕೇರಳ ಮೂಲದ ಜೂನಿಯರ್ ಆರ್ಟಿಸ್ಟ್ ಕಪಿಲ್ ಅವರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!