Tuesday, September 27, 2022

Latest Posts

ಮದುವೆ ಮನೆಗೆ ಬಣ್ಣ ಹೊಡೆಯಲು ಹೋಗಿದ್ದ ಯುವಕ ಕಾಲು ಜಾರಿ ಬಿದ್ದು ಸಾವು

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
……………………………………………………….

ಹೊಸ ದಿಗಂತ ವರದಿ, ಮದ್ದೂರು :

ಮದುವೆ ಮನೆಗೆ ಬಣ್ಣ ಹೊಡೆಯಲು ಹೋಗಿದ್ದ ಪೇಂಟರ್ ಕಾಲುಜಾರಿ ಬಿದ್ದು ಮೃತಪಟ್ಟಿರುವ ಘಟನೆ ತಾಲ್ಲೂಕಿನ ಬೆಸಗರಹಳ್ಳಿ ಗ್ರಾಮದ ತಮಿಳು ಕಾಲೋನಿಯಲ್ಲಿ ಮಂಗಳವಾರ ಸಂಜೆ ಜರುಗಿದೆ.
ಗ್ರಾಮದ ತಮಿಳು ಕಾಲೋನಿಯ ನಿವಾಸಿ ಅಂಬರೀಶ್(35) ಮೃತವ್ಯಕ್ತಿ.
ಮೃತ ಅಂಬರೀಶ್ ತಮ್ಮ ಪಕ್ಕದ ಮನೆಯ ಮದುವೆ ಮನೆಗೆ ಬಣ್ಣ ಹೊಡೆಯುತ್ತಿದ್ದ ವೇಳೆ ಕಟ್ಟದ ಮೇಲಿಂದ ಕಾಲುಜಾರಿ ಬಿದ್ದು ತೀವ್ರವಾಗಿ ಗಾಯಗೊಂಡಿದ್ದನು. ಈತನನ್ನು ಮದ್ದೂರು ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡುತ್ತಿದ್ದ ವೇಳೆ ಕೊನೆಯುಸಿರೆಳೆದಿದ್ದಾನೆ. ಈ ಸಂಬಂಧ ಬೆಸಗರಹಳ್ಳಿ ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.
ಕಟ್ಟಡ ನಿರ್ಮಾಣ ಮತ್ತು ಇತರ ಕಾರ್ಮಿಕರ ಸಂಘದ ಜಿಲ್ಲಾಧ್ಯಕ್ಷ ಆರ್.ಶ್ರೀನಿವಾಸ್, ಪುರಸಭಾ ಸದಸ್ಯ ಎಂ.ಐ.ಪ್ರವೀಣ್ ಆಸ್ಪತ್ರೆಗೆ ಭೇಟಿ ನೀಡಿ ಕುಟುಂಬಕ್ಕೆ ಸೂಕ್ತ ಪರಿಹಾರ ದೊರಕಿಸಿಕೊಡುವುದಾಗಿ ಭರವಸೆ ನೀಡಿದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!