ಶೀಘ್ರದಲ್ಲೇ ರಾಜ್ಯಾದ್ಯಂತ ʻಗೃಹ ಆರೋಗ್ಯʼ ಯೋಜನೆ ಜಾರಿ: ಮನೆಬಾಗಿಲಿಗೇ ಆರೋಗ್ಯ ಸೇವೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ರಾಜ್ಯ ಸರ್ಕಾರ ಇದೀಗ ರೋಗಿಗಳ ಮನೆ ಬಾಗಿಲಿಗೇ ಔಷಧ ಪೂರೈಕೆ ಮಾಡಲು ನಿರ್ಧರಿಸಿದೆ. ರಕ್ತದೊತ್ತಡ ಹಾಗು ಮಧುಮೇಹ ರೋಗಿಗಳ ಮನೆಗಳಿಗೆ ತೆರಳಿ ಔಷಧ ವಿತರಿಸುವ ʻಗೃಹ ಆರೋಗ್ಯʼ ಯೋಜನೆಯನ್ನು ಶೀಘ್ರದಲ್ಲೇ ಜಾರಿಗೊಳಿಸಲು ಮುಂದಾಗಿದೆ. ಈಗಾಗಲೇ ಸಕಲ ತಯಾರಿ ಮಾಡಿಕೊಂಡಿದ್ದು, ಶೀಘ್ರದಲ್ಲಿ ಯೋಜನೆ ಅನುಷ್ಠಾನಕ್ಕೆ ತರಲು ಮುಂದಾಗಿದೆ.

ಅದಕ್ಕಾಗಿ ಆಯಾ ಜಿಲ್ಲೆಗಳಲ್ಲಿ ಆರೋಗ್ಯಾಧಿಕಾರಿಗಳು ಆಶಾ ಮತ್ತು ಅಂಗನವಾಡಿ ಕಾರ್ಯಕರ್ತರ ಮೂಲಕ ಜಿಲ್ಲೆಯಲ್ಲಿ ಯಾವ ಮನೆಯಲ್ಲಿ ಎಷ್ಟು ಮಂದಿ ರಕ್ತದೊತ್ತಡ ಮತ್ತು ಮಧುಮೇಹ ಸಮಸ್ಯೆಗಳಿಗೆ ಗುರಿಯಾಗಿದ್ದಾರೆ ಎಂಬೆಲ್ಲ ಅಂಕಿ ಅಂಶವನ್ನು ಕಲೆಹಾಕುತ್ತಿದ್ದಾರೆ.

ಎಷ್ಟು ಪ್ರಮಾಣದಲ್ಲಿ ಮಾತ್ರೆಗಳನ್ನು ವಿತರಣೆ ಮಾಡಬೇಕು ಎಂಬ ಅಂಕಿ ಅಂಶವನ್ನು ಸಹ ಕುಟುಂಬ ಕಲ್ಯಾಣ ಇಲಾಖೆ ಸಂಗ್ರಹಿಸಿದೆ. ಇದರ ಆಧಾರದ ಮೇಲೆ ಇನ್ಮುಂದೆ ಮನೆ ಬಾಗಿಲಿಗೇ ಔಷಧ ಪೂರೈಕೆ ಆಗಲಿದೆ. ಒಟ್ಟಿನಲ್ಲಿ ರಾಜ್ಯದ ಜನರ ಆರೋಗ್ಯ ಕಾಪಾಡುವ ನಿಟ್ಟಿನಲ್ಲಿ ಇದೊಂದು ಮಹತ್ವದ ಹೆಜ್ಜೆಯಾಗಲಿದೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!