Saturday, August 13, 2022

Latest Posts

ಹೋಂ ಐಸೋಲೇಷನ್ ಬೇಡ ಕೋವಿಡ್ ಕೇರ್ ಸೆಂಟರ್‌ಗೆ ದಾಖಲಿಸಿ: ಶಾಸಕ ತಮ್ಮಣ್ಣ ಒತ್ತಾಯ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………………………………..

ಹೊಸದಿಗಂತ ವರದಿ, ಮದ್ದೂರು:

ಕೋವಿಡ್ 2ನೇ ಅಲೆ ತೀವ್ರವಾಗಿ ಜನರನ್ನು ಕಾಡುತ್ತಿದೆ. ಯಾವುದೇ ಗುಣ ಲಕ್ಷಣಗಳಿಲ್ಲದ ಗ್ರಾಮೀಣ ಭಾಗದ ಸೋಂಕಿತರನ್ನು ಹೋಂ ಐಸೋಲೇಷನ್ ಮಾಡುವುದು ಸರಿಯಲ್ಲ. ಅವರನ್ನೂ ಕೋವಿಡ್ ಕೇರ್ ಸೆಂಟರ್‌ಗಳಿಗೆ ದಾಖಲಿಸಿ ಚಿಕಿತ್ಸೆ ನೀಡುವುದು ಉತ್ತಮ ಬೆಳವಣಿಗೆ ಎಂದು ಶಾಸಕ ಡಿ.ಸಿ. ತಮ್ಮಣ್ಣ ಸಲಹೆ ನೀಡಿದ್ದಾರೆ.
ಸುದ್ಧಿಗಾರರೊಂದಿಗೆ ಮಾತನಾಡಿದ ಅವರು, ಹಳ್ಳಿಗಾಡಿನಲ್ಲಿ ಸೋಂಕಿತ ಪ್ರಕರಣಗಳು ಹೆಚ್ಚುತ್ತಿವೆ. ಗುಣಲಕ್ಷಣಗಳಿಲ್ಲದವರನ್ನು ಹೋಂ ಐಸೋಲೇಷನ್‌ಗೆ ಒಳಪಡಿಸಿ ನಿಗಾ ಇರಿಸಲಾಗುತ್ತದೆ. ಆದರೆ ಅವರೆಲ್ಲರೂ ಜವಾಬ್ದಾರಿಯಿಂದ ನಡೆದುಕೊಳ್ಳುತ್ತಿಲ್ಲ. ಸೋಂಕಿತರೇ ಬಂದು ಮಾರುಕಟ್ಟೆಗಳಲ್ಲಿ ಸಾಮಗ್ರಿಗಳನ್ನು ಖರೀದಿಸುವುದು, ಇತರೆಡೆಗಳಲ್ಲಿ ಓಡಾಡುವುದನ್ನು ಮುಂದುವರಿಸಿದ್ದಾರೆ. ಇದರಿಂದ ಮತ್ತಷ್ಟು ಸೋಂಕು ಹೆಚ್ಚುವ ಸಂಭವಗಳಿವೆ. ಎಲ್ಲವನ್ನೂ ಪರಾಮರ್ಶಿಸಿ ಗ್ರಾಮೀಣ ಭಾಗದ ಸೋಂಕಿತರನ್ನು ಕಡ್ಡಾಯವಾಗಿ ಕೋವಿಡ್ ಕೇರ್ ಕೇಂದ್ರಗಳಲ್ಲಿಟ್ಟು ಚಿಕಿತ್ಸೆ ನೀಡವಂತೆ ಟಾಸ್‌‌ಕೆರ್ಸ್‌ನ ಅಧ್ಯಕ್ಷರು, ಉನ್ನತ ಶಿಕ್ಷಣ ಸಚಿವರೂ ಆದ ಸಿ.ಎನ್. ಅಶ್ವತ್ಥನಾರಾಯಣ ಅವರಿಗೆ ಪತ್ರ ಬರೆದು ಒತ್ತಾಯಿಸಿರುವುದಾಗಿ ತಿಳಿಸಿದರು.
ಶಾಲಾ ಕೊಠಡಿಗಳಲ್ಲಿ ಲಸಿಕೆ ಅವೈಜ್ಞಾನಿಕ ನಿರ್ಧಾರ:
ಶಾಲಾ ಕೊಠಡಿಗಳಲ್ಲಿ ಮತ್ತು ಆಟದ ಮೈದಾನಗಳಲ್ಲಿ ಲಸಿಕೆ ನೀಡಲು ಸರ್ಕಾರ ಚಿಂತನೆ ನಡೆಸಿದೆ. ಲಸಿಕಾ ಕೇಂದ್ರಗಳಲ್ಲಿ ಹೆಚ್ಚಿನ ಜನದಟ್ಟಣೆ ಆಗುತ್ತದೆ. ಇದರಿಂದಾಗಿ ಸೋಂಕು ಹರಡುವ ಸಾಧ್ಯತೆಗಳಿವೆ ಎಂಬ ನಿಲುವಿಗೆ ಸರ್ಕಾರ ಬಂದಿದ್ದು, ಇದು ಅವೈಜ್ಞಾನಿಕ ನಿರ್ಧಾರವಾಗಿದೆ. ಶಾಲೆ ಮತ್ತು ಆಟದ ಮೈದಾನದಲ್ಲೂ ಜನದಟ್ಟಣೆ ಹೆಚ್ಚುತ್ತದೆ. ಸರಿಯಾದ ರೀತಿಯಲ್ಲಿ ಲಸಿಕೆಗಳನ್ನು ಒದಗಿಸಿದರೆ ಯಾವುದೇ ತೊಂದರೆಯೂ ಆಗುವುದಿಲ್ಲ ಎಂದು ತಿಳಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss