ದರ್ಶನ್​ಗೆ ಮನೆ ಊಟ ಸಿಗತ್ತಾ ಇಲ್ವಾ? ಇಂದು ಹೈಕೋರ್ಟ್ ವಿಚಾರಣೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ದರ್ಶನ್​ಗೆ ಮನೆ ಊಟ ಬೇಕೆಂದು ಸಲ್ಲಿಸಿದ್ದ ರಿಟ್ ಅರ್ಜಿಯ ವಿಚಾರಣೆ ಇಂದು ನಡೆಯಲಿದೆ.

ಮನೆ ಊಟ, ಮಲಗಲು ಹಾಸಿಗೆ ಹಾಗೂ ಕೆಲವು ಪುಸ್ತಕಗಳು ಬೇಕೆಂದು ನಟ ದರ್ಶನ್ ಹೈಕೋರ್ಟ್​ಗೆ ರಿಟ್ ಅರ್ಜಿ ಸಲ್ಲಿಸಿದ್ದರು. ರಿಟ್ ಅರ್ಜಿಯಲ್ಲಿ ಆರೋಗ್ಯದ ಕಾರಣ ನೀಡಿದ್ದರು. ರಿಟ್ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್​ನ ಏಕಸದಸ್ಯ ಪೀಠ ನಡೆಸಲಿದೆ.

ಕಳೆದ ಬಾರಿ ರಿಟ್ ಅರ್ಜಿಯ ವಿಚಾರಣೆ ನಡೆಸಿದ್ದ ನ್ಯಾಯಾಲಯವು ಪರಪ್ಪನ ಅಗ್ರಹಾರ ಜೈಲು ಅಧಿಕಾರಿಗಳು ಈ ಬಗ್ಗೆ ನಿರ್ಣಯ ಕೈಗೊಂಡು ವರದಿ ಸಲ್ಲಿಸುವಂತೆ ಸೂಚಿಸಿದ್ದರು. ಈಗಾಗಲೇ ವರದಿ ಸಲ್ಲಿಕೆ ಆಗಲಿದ್ದು, ಇಂದು ಹೈಕೋರ್ಟ್ ಏಕ ಸದಸ್ಯ ಪೀಠ ತನ್ನ ನಿರ್ಣಯ ಪ್ರಕಟಿಸುವ ಸಾಧ್ಯತೆ ಇದೆ. ಜೈಲು ಅಧಿಕಾರಿಗಳು, ಮನೆ ಊಟದ ಅವಶ್ಯಕತೆ ಇಲ್ಲವೆಂದೇ ವರದಿ ನೀಡಿದ್ದಾರೆ ಎನ್ನಲಾಗಿದೆ. ಜೈಲಿನ ವೈದ್ಯಾಧಿಕಾರಿಗಳು ಸಹ ದರ್ಶನ್​ಗೆ ಮನೆ ಊಟದ ಅವಶ್ಯಕತೆ ಇಲ್ಲವೆಂದೇ ವರದಿ ನೀಡಿದ್ದಾರೆ ಎನ್ನಲಾಗುತ್ತಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!