ತುಮಕೂರಿನಲ್ಲಿ ಧ್ವಜಾರೋಹಣ ನೆರವೇರಿಸಿದ ಗೃಹ ಸಚಿವ ಆರಗ ಜ್ಞಾನೇಂದ್ರ

ಹೊಸದಿಗಂತ ವರದಿ, ತುಮಕೂರು:

ತುಮಕೂರು ಜಿಲ್ಲಾ ಉಸ್ತುವಾರಿ ಸಚಿವರಾದ ಆರಗ ಜ್ಞಾನೇಂದ್ರ ಅವರು ಗಣರಾಜ್ಯೋತ್ಸವದ ಅಂಗವಾಗಿ ಧ್ವಜಾರೋಹಣ ನೆರವೇರಿಸಿದರು.
ಜಿಲ್ಲೆಯ ಕ್ಯಾತ್ಸಂದ್ರ ಬಳಿಯಿರುವ ಸಿದ್ದಗಂಗಾ ಮಠದ ಆವರಣದಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ ಧ್ವಜಾರೋಹಣ ನೆರವೇರಿಸಿದರು.
ಈ ವೇಳೆ ಮಾತನಾಡಿದ ಅವರು, ಇದು ನನ್ನ ಜೀವನದ ಅತಿ ಅಪರೂಪದ ಕ್ಷಣ. ಮುಖ್ಯಮಂತ್ರಿಗಳು ಮಂಗಳವಾರ ನನ್ನನ್ನು ತುಮಕೂರು ಜಿಲ್ಲಾ ಉಸ್ತುವಾರಿಯನ್ನಾಗಿ ನೇಮಿಸಿದರು. ಈ ತಪೋ ಭೂಮಿಯಲ್ಲಿ ಧ್ವಜಾರೋಹಣ ನಡೆಸಿರುವುದು ನನ್ನ ಭಾಗ್ಯ. ಎಲ್ಲರಿಗೂ ಗಣರಾಜ್ಯೋತ್ಸವದ ಶುಭಾಶಯಗಳು ಎಂದು ನುಡಿದರು.
ಈ ಸಂದರ್ಭದಲ್ಲಿ ಸಿದ್ಧಗಂಗಾ ಮಠಾಧ್ಯಕ್ಷರಾದ ಲಿಂಗೈಕ್ಯ ಡಾ. ಶ್ರೀ ಶಿವಕುಮಾರ ಸ್ವಾಮಿಗಳ ಮಂದಸ್ಮಿತ ಭಾವಚಿತ್ರಗಳನ್ನು ರಾಜ್ಯದ ಎಲ್ಲಾ ಸರ್ಕಾರಿ ಕಚೇರಿಗಳಿಗೆ ವಾರ್ತಾ ಇಲಾಖೆಯ ಮೂಲಕ ವಿತರಿಸಲಾಯಿತು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!