ಜಮ್ಮು ಕಾಶ್ಮೀರದ ನೂತನ ʼತಿರುಪತಿ ಬಾಲಾಜಿʼ ದೇವಾಲಯ ಗೃಹ ಸಚಿವರಿಂದ ಲೋಕಾರ್ಪಣೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ಜಮ್ಮು ಮತ್ತು ಕಾಶ್ಮೀರದಲ್ಲಿ ನೂತನವಾಗಿ ನಿರ್ಮಿಸಲಾದ ತಿರುಪತಿ ಬಾಲಾಜಿ ದೇವಾಲಯನ್ನು ಇಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಲೋಕಾರ್ಪಣೆ ಮಾಡಿದರು.

ಮಜೀನ್ ನ ಸುಂದರವಾದ ಶಿವಾಲಿಕ್ ಕಾಡುಗಳ ನಡುವೆ ಇರುವ ತಿರುಪತಿ ಬಾಲಾಜಿ ದೇವಾಲಯನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಉದ್ಘಾಟಿಸಿದರು.

62 ಎಕರೆ ಭೂಮಿಯಲ್ಲಿ ನಿರ್ಮಿಸಲಾದ ತಿರುಪತಿ ಬಾಲಾಜಿ ದೇವಾಲಯವು ಜಮ್ಮು ಪ್ರದೇಶದ ಅತಿದೊಡ್ಡ ದೇವಾಲಯಗಳಲ್ಲಿ ಒಂದಾಗಲಿದೆ ಮತ್ತು ಕೇಂದ್ರಾಡಳಿತ ಪ್ರದೇಶದಲ್ಲಿ ಧಾರ್ಮಿಕ ಮತ್ತು ತೀರ್ಥಯಾತ್ರೆ ಪ್ರವಾಸೋದ್ಯಮವನ್ನು ಹೆಚ್ಚಿಸುವ ನಿರೀಕ್ಷೆಯಿದೆ.

62 ಎಕರೆ ಭೂಮಿಯಲ್ಲಿ ಸುಮಾರು 25 ಕೋಟಿ ರೂ.ಗಳ ವೆಚ್ಚದಲ್ಲಿ ದೇವಾಲಯವನ್ನು ನಿರ್ಮಿಸಲಾಗಿದ್ದು, ಎರಡು ವರ್ಷಗಳ ಅವಧಿಯಲ್ಲಿ ನಿರ್ಮಾಣ ಕಾರ್ಯವನ್ನು ಮುಕ್ತಾಯಗೊಳಿಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!