ಹೊಸದಿಗಂತ ವರದಿ,ಮೈಸೂರು:
ಕೇಂದ್ರ ಗೃಹ ಮತ್ತು ಸಹಕಾರ ಸಚಿವರಾದ ಅಮಿತ್ ಶಾ ಅವರು ಭಾನುವಾರ ಮೈಸೂರಿನ ಚಾಮುಂಡಿಬೆಟ್ಟಕ್ಕೆ ಭೇಟಿ ನೀಡಿ ನಾಡು ದೇವತೆ ತಾಯಿ ಚಾಮುಂಡೇಶ್ವರಿ ದರುಶನ ಪಡೆದರು.
ಬೆಳಗ್ಗೆ ೧೧ರ ವೇಳೆಗೆ ಬೆಟ್ಟಕ್ಕೆ ಆಗಮಿಸಿ, ಚಾಮುಂಡೇಶ್ವರಿಯ ದರ್ಶನ ಪಡೆಯಲು ಈ ಮೊದಲು ಸಮಯ ನಿಗದಿಯಾಗಿತ್ತು. ಆದರೆ ತಮ್ಮ ಕಾರ್ಯಕ್ರಮದ ವೇಳಾಪಟ್ಟಿಯನ್ನೇ ಅಮಿತ್ ಶಾ ಅವರು ಬದಲಾಯಿಸಿದರು. ಬೆಟ್ಟಕ್ಕೆ ಹೋಗುವ ಬದಲು ನೇರವಾಗಿ ಸುತ್ತೂರು ಜಾತ್ರಾಮಹೋತ್ಸವದ ಕಾರ್ಯಕ್ರಮಕ್ಕೆ ತೆರಳಿದರು. ಅಲ್ಲಿ ಕಾರ್ಯಕ್ರಮ ಮುಗಿಸಿಕೊಂಡು ಮಧ್ಯಾಹ್ನ ಮೈಸೂರಿಗೆ ಆಗಮಿಸಿ, ಚಾಮುಂಡಿಬೆಟ್ಟಕ್ಕೆ ಬಂದು, ಚಾಮುಂಡೇಶ್ವರಿ ದೇವಿಯ ದರುಶನ ಪಡೆದ, ವಿಶೇಷ ಪೂಜೆ ಸಲ್ಲಿಸಿದರು.
ದೇವಸ್ಥಾನದ ಪ್ರಧಾನ ಅರ್ಚಕ ಶಶಿಶೇಖರ್ ದೀಕ್ಷಿತರಿಂದ ವಿಶೇಷ ಪೂಜೆ ನೆರವೇರಿಸಿದರು. ಚಾಮುಂಡಿ ಬೆಟ್ಟಕ್ಕೆ ಆಗಮಿಸಿದ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಅಮಿತ್ ಶಾಗೆ ದೇವಾಲಯದ ವತಿಯಿಂದ ಪೂರ್ಣಕುಂಭ ಸ್ವಾಗತ ಕೋರಲಾಯಿತು.
ಈ ವೇಳೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಸಂಸದ ಪ್ರತಾಪ್ ಸಿಂಹ, ಮಾಜಿ ಶಾಸಕರಾದ ಎಲ್.ನಾಗೇಂದ್ರ ಹಾಗೂ ಹಲವು ಮುಖಂಡರು ಗೃಹ ಸಚಿವರನ್ನು ಬರಮಾಡಿಕೊಂಡರು. ಪೂಜೆ ಮುಗಿಸಿದ ಬಳಿಕ ಮೈಸೂರಿನ ಖಾಸಗಿ ಪಂಚತಾರಾ ಹೋಟೆಲ್ಗೆ ಆಗಮಿಸಿದ ಅಮಿತ್ ಶಾ ಅವರು ಬಿಜೆಪಿ ಕೋರ್ ಕಮಿಟಿಯ ಸಭೆ ಬಳಿಕ ಕ್ಲಸ್ಟರ್ ಮಟ್ಟದ ಪ್ರಮುಖರ ಸಭೆಯನ್ನು ಸುದೀರ್ಘವಾಗಿ ನಡೆಸಿದರು.