September 19, 2026
Saturday, September 19, 2026
spot_img

ಗೃಹ ಸಚಿವ ಅಮಿತ್ ಶಾ ಆರೋಗ್ಯದಲ್ಲಿ ಏರುಪೇರು: ವಿಶ್ರಾಂತಿಯ ಬಳಿಕ ಗುಜರಾತ್ ಗೆ ವಾಪಸ್

ಹೊಸದಿಗಂತ ವರದಿ ಹುಬ್ಬಳ್ಳಿ:

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಆರೋಗ್ಯ ಸುಧಾರಣೆಯಾದ ಹಿನ್ನೆಲೆಯಲ್ಲಿ ಸಂಜೆ 5.30 ಕ್ಕೆ ಜೆಜಿಎಂಎಂ ವೈದ್ಯಕೀಯ ಕಾಲೇಜು ಕೆಎಲ್‌ಇ ಆಸ್ಪತ್ರೆ ಮತ್ತು ವೈದ್ಯಕೀಯ ಸಂಶೋಧನಾ ಕೇಂದ್ರಕ್ಕೆ ಭೇಟಿ ನೀಡಿದರು. ಬಳಿಕ ಅಲ್ಲಿಂದ ಸಂಜೆ 6 ಗಂಟೆಗೆ ವಿಮಾನದ ಮೂಲಕ ಗುಜರಾತ್ ಗೆ ತೆರಳಿದರು ಎಂದು ಮೂಲಗಳು ತಿಳಿಸಿವೆ.

ಅತಿಸಾರದಿಂದ ಆರೋಗ್ಯದಲ್ಲಿ ಏರುಪೇರಾಗಿದ್ದು ಸಮಾರಂಭದಲ್ಲಿ ಭಾಗವಹಿಸಲು ಸಾಧ್ಯವಾಗಿರಲಿಲ್ಲ. ಏಳು ತಜ್ಞ ವೈದ್ಯರು ಚಿಕಿತ್ಸೆ ನೀಡಿದರು ಎನ್ನಲಾಗಿದ್ದು, ಅನಾರೋಗ್ಯದಿಂದ 2-3 ಗಂಟೆ ವಿಶ್ರಾಂತಿ ಪಡೆಯಲು ಗೃಹ ಸಚಿವ ಅಮಿತ್ ಶಾ ಅವರಿಗೆ ಸಲಹೆ ನೀಡಿದ್ದರು.

ಈ ಹಿನ್ನೆಲೆ ಅಮಿತ್ ಶಾ ಅವರ ಅನುಪಸ್ಥಿತಿಯಲ್ಲಿ ಮಧ್ಯಾಹ್ನ 12.15 ಕ್ಕೆ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಜೆಜಿಎಂಎಂ ವೈದ್ಯಕೀಯ ಕಾಲೇಜು ಕಟ್ಟಡ, ಕೆಎಲ್‌ಇ ಆಸ್ಪತ್ರೆ ಮತ್ತು ವೈದ್ಯಕೀಯ ಸಂಶೋಧನಾ ಕೇಂದ್ರ ಲೋಕಾರ್ಪಣೆಗೊಳಿಸಿದ್ದರು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !