Wednesday, July 6, 2022

Latest Posts

ಜಮ್ಮು- ಕಾಶ್ಮೀರಕ್ಕೆ ಗೃಹ ಸಚಿವ ಅಮಿತ್ ಶಾ ಭೇಟಿ: ಹೆಚ್ಚಿದ ಬಿಗಿ ಭದ್ರತೆ

ಹೊಸ ದಿಗಂತ ಆನ್ ಲೈನ್ ಡೆಸ್ಕ್:

ಜಮ್ಮು ಮತ್ತು ಕಾಶ್ಮೀರದಲ್ಲಿ ದಿನದಿಂದ ದಿನಕ್ಕೆ ಉಗ್ರರ ಅಟ್ಟಹಾಸ ಹೆಚ್ಚುತ್ತಿರುವ ಹಿನ್ನೆಲೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಶೀಘ್ರವೇ ಜಮ್ಮು- ಕಾಶ್ಮೀರಕ್ಕೆ ಭೇಟಿ ನೀಡಲಿದ್ದಾರೆ.

ಅಮಿತ್ ಶಾ ಆಗಮನದ ಹಿನ್ನೆಲೆ ಈಗಾಗಲೇ ಭದ್ರತಾ ಸಂಬಂಧಿ ಕಾರ್ಯಗಳು ಆರಂಭವಾಗಿದ್ದು, ಹಲವು ಸ್ಥಳಗಳನ್ನು ಪರಿಶೀಲನೆ ನಡೆಸಲಾಗಿದೆ. ಶ್ರೀನಗರದಲ್ಲಿ ಸಂಚರಿಸು ವಾಹನ ಮತ್ತು ವಾಹನ ಸವಾರರ ಗುರುತಿನ ಚೀಟಿಯನ್ನು ಪರಿಶೀಲಿಸಲಾಗುತ್ತಿದೆ.

ಅಕ್ಟೋಬರ್ 23.24 ರಂದು ಅಮಿತ್ ಶಾ ಕಾಶ್ಮೀರಕ್ಕೆ ಭೇಟಿ ನೀಡುವ ಸಾಧ್ಯತೆ ಇದೆ ಎನ್ನಲಾಗಿದೆ. ಇತ್ತೀಚೆಗೆ ಭಯೋತ್ಪಾದಕರ ದಾಳಿಯಲ್ಲಿ ಸ್ಥಳೀಯರಲ್ಲದ ನಾಲ್ಕು ಮಂದಿ ಸೇರಿದಂತೆ 9 ನಾಗರಿಕರು  ಮೃತಪಟ್ಟಿದ್ದು, ಈ ವಿಚಾರವಾಗಿ ಅಮಿತ್ ಶಾ ಚರ್ಚೆ ನಡೆಸಲಿದ್ದಾರೆ.

 

 

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss