ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಗೃಹ ಸಚಿವ ಅರಗ ಜ್ಞಾನೇಂದ್ರ ಭೇಟಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌

ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಗೃಹ ಸಚಿವ ಅರಗ ಜ್ಞಾನೇಂದ್ರ ಭಾನುವಾರ ರಾತ್ರಿ ಆಗಮಿಸಿದರು.
ಸೋಮವಾರ ಮುಂಜಾನೆ ಅವರು ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಳದಲ್ಲಿ ಆಶ್ಲೇಷ ಬಲಿ ಪೂಜೆಯಲ್ಲಿ ಪಾಲ್ಗೊಳ್ಳಲಿದ್ದಾರೆ .
ಪುರುಷೋತ್ತಮ ಕೃಷಿ ಸಂಶೋಧನಾ ಪ್ರತಿಷ್ಠಾನ ತೀರ್ಥಹಳ್ಳಿ ಇದರ ವತಿಯಿಂದ ನಡೆಸಲ್ಪಡುವ ಆಶ್ಲೇಷ ಬಲಿ ಪೂಜೆಯಲ್ಲಿ ಗೃಹ ಸಚಿವರು ಪಾಲ್ಗೊಳ್ಳಲಿದ್ದಾರೆ. ಸಚಿವರು ಪ್ರತಿಷ್ಠಾನದ ಉಪಾಧ್ಯಕ್ಷ ಆಗಿದ್ದಾರೆ. ಈ ಹಿನ್ನೆಲೆ ಅವರು ನಾಳಿನ ಪೂಜೆಯಲ್ಲಿ ಬಾಗವಹಿಸಲಿದ್ದಾರೆ. ಕ್ಷೇತ್ರಕ್ಕೆ ಆಗಮಿಸಿದ ಗೃಹ ಸಚಿವರನ್ನು ಕುಕ್ಕೆ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮೋಹನ್ ರಾಂ ಸುಳ್ಳಿ ಸ್ವಾಗತಿಸಿದರು. ಈ ಸಂದರ್ಭ ದೇವಳದ ಕಾರ್ಯನಿರ್ವಹಣಾಧಿಕಾರಿ ಡಾ.ನಿಂಗಯ್ಯ .ಎ ಇ ಒ ಪುಷ್ಪಲತಾ ರಾವ್, ವ್ಯವಸ್ಥಾಪನಾ ಸಮಿತಿ ಸದಸ್ಯರು ಉಪಸ್ಥಿತರಿದ್ದರು .

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!