ಪೊಲೀಸ್ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಗೃಹ ಸಚಿವ ಆರಗ ಜ್ಞಾನೇಂದ್ರ

ಹೊಸದಿಗಂತ ವರದಿ, ಕಲಬುರಗಿ:

ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಶನಿವಾರ ನಗರದ ಪೊಲೀಸ್ ಭವನದಲ್ಲಿ ಜಿಲ್ಲಾ ಪೊಲೀಸ್ ಘಟಕ ಮತ್ತು ಕಲಬುರಗಿ ಪೊಲೀಸ್ ಆಯುಕ್ತಾಯಲದ ಅಧಿಕಾರಿಗಳೊಂದಿಗೆ ವಿಮರ್ಶನಾ ಸಭೆ ನಡೆಸಿದರು.

ಕಲಬುರಗಿ ಜಿಲ್ಲೆ ಮತ್ತು ಮಹಾನಗರ ವ್ಯಾಪ್ತಿಯಲ್ಲಿನ ಶಾಂತಿ, ಸುವ್ಯವಸ್ಥೆ ಪಾಲನೆ ಹಾಗೂ ಅಪರಾಧಗಳ ಕುರಿತು ಸಮಗ್ರವಾಗಿ ಅಧಿಕಾರಿಗಳಿಂದ ಮಾಹಿತಿ ಪಡೆದ ಸಚಿವರು ಅಗತ್ಯ ನಿರ್ದೇಶನಗಳನ್ನು ನೀಡಿದರು.

ಸಭೆಯಲ್ಲಿ ಈಶಾನ್ಯ ವಲಯದ ಪೊಲೀಸ್ ಮಹಾ ನಿರೀಕ್ಷಕ ಮನೀಷ ಖರ್ಬಿಕರ್, ಕಲಬುರಗಿ ನಗರ ಪೊಲೀಸ್ ಆಯುಕ್ತ ಡಾ.ವೈ.ಎಸ್.ರವಿಕುಮಾರ, ಡಿ.ಸಿ.ಪಿ. ಅಡ್ಡೂರು ಶ್ರೀನಿವಾಸಲು, ಜಿಲ್ಲಾ ಪೊಲೀಸ್ ಅಧೀಕ್ಷಕಿ ಇಶಾ ಪಂತ್, ಹೆಚ್ಚುವರಿ ಎಸ್.ಪಿ. ಪ್ರಸನ್ನ ದೇಸಾಯಿ ಸೇರಿದಂತೆ ಜಿಲ್ಲೆಯ ವಿವಿಧ ಹಂತದ ಪೊಲೀಸ್ ಅಧಿಕಾರಿಗಳಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!