ಹೊಸದಿಗಂತ ಡಿಜಿಟಲ್ ಡೆಸ್ಕ್:
ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರು ಇಂದಿನಿಂದ ಎರಡು ದಿನ ಮಂಗಳೂರು, ಉಡುಪಿ ಪ್ರವಾಸ ಕೈಗೊಂಡಿದ್ದಾರೆ. ಈಗಾಗಲೇ ಮಂಗಳೂರು ಏರ್‌ಪೋರ್ಟ್‌ಗೆ ಆಗಮಿಸಿದ್ದು, 10 ಗಂಟೆಗೆ ಪೊಲೀಸ್ ಪಶ್ಚಿಮ ವಲಯ ಕಚೇರಿಯಲ್ಲಿ ವಲಯ ಪರಿಶೀಲನಾ ಸಭೆ ನಡೆಸಲಿದ್ದಾರೆ.
ಮಧ್ಯಾಹ್ನ ಕಾಂಗ್ರೆಸ್ ಕಚೇರಿಗೆ ಭೇಟಿ ನೀಡಲಿದ್ದು, ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಪೊಲೀಸ್ ಪ್ರಗತಿ ಪರಿಶೀಲನಾ ಸಭೆ ನಡೆಸಲಿದ್ದಾರೆ. ಮಧ್ಯಾಹ್ನ ಉಡುಪಿಗೆ ತೆರಳಿ ಅಲ್ಲಿಯೂ ಸಭೆ ನಡೆಸಲಿದ್ದಾರೆ.
ನಾಳೆ ಬೆಳಗ್ಗೆ ಕೊಲ್ಲೂರಿನ ಮೂಕಾಂಬಿಕಾ ದೇವಿಯ ದರುಶನ ಪಡೆದು ಬೆಂಗಳೂರಿಗೆ ವಾಪಾಸಾಗಲಿದ್ದಾರೆ.