ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಪೊಲೀಸ್ ಇಲಾಖೆಯಲ್ಲಿ 4,600 ಪೊಲೀಸ್ ಕಾನ್‌ಸ್ಟೆಬಲ್ ಹುದ್ದೆಗೆ ಅಧಿಸೂಚನೆ ಹೊರಬೀಳಲಿದೆ.
ಈ ಬಗ್ಗೆ ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವ ಜಿ. ಪರಮೇಶ್ವರ್ ಈ ಕುರಿತ ಕಡತವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಳಿ ಕಳುಹಿಸಲಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ.
ಇದೇ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಉತ್ತರಾಧಿಕಾರಿ ಸತೀಶ್ ಜಾರಕಿಹೊಳಿ ಎಂದು ಪರಿಷತ್ ಸದಸ್ಯ ಯತೀಂದ್ರ ಸಿದ್ದರಾಮಯ್ಯ ಹೇಳಿರುವುದರಲ್ಲಿ ತಪ್ಪೇನಿದೆ ಎಂದು ಕೂಡಾ ಪ್ರಶ್ನಿಸಿದ್ದಾರೆ. ಸತೀಶ್ ಜಾರಕಿಹೊಳಿ ಈ ಹಿಂದೆ ಅಹಿಂದಾ ಚಳವಳಿಯಲ್ಲಿದ್ದರು. ಈ ಹಿನ್ನೆಲೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಯತೀಂದ್ರ ಅವರು ಹೇಳಿಕೆ ನೀಡಿರಬಹುದು ಎಂದು ಸಮರ್ಥಿಸಿಕೊಂಡಿದ್ದಾರೆ. ಮುಖ್ಯಮಂತ್ರಿ ರೇಸ್‌ನಲ್ಲಿ ತಮ್ಮ ಹೆಸರಿರುವ ಕುರಿತಂತೆ ಪ್ರತಿಕ್ರಿಯಿಸಿ, ಹೈಕಮಾಂಡ್ ನಿರ್ಧಾರವೇ ಅಂತಿಮ ಎಂದು ಹೇಳಿದ್ದಾರೆ.
ಪೊಲೀಸ್ ಇಲಾಖೆಗೆ ಗುಡ್ ನ್ಯೂಸ್ ಕೊಟ್ಟ ಗೃಹ ಸಚಿವರು: ಶೀಘ್ರ 4600 ಸಿಬ್ಬಂದಿ ಹುದ್ದೆಗೆ ಅಧಿಸೂಚನೆ

