ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಾಂಗ್ರೆಸ್ ಸರ್ವ ಸದಸ್ಯರ ಸಭೆಗೆ ಗೃಹ ಸಚಿವ ಪರಮೇಶ್ವರ್ ಮತ್ತು ಸಹಕಾರಿ ಸಚಿವ ಕೆ.ಎನ್ ರಾಜಣ್ಣ ಗೈರಾಗಿದ್ದಾರೆ.
ರಣದೀಪ್ ಸುರ್ಜೇವಾಲಾ ಅವರ ಅನುಪಸ್ಥಿತಿಯಿಂದ ಬೇಸರಗೊಂಡಿದ್ದಾರೆ. ಈ ಕುರಿತು ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಂದ ಮಾಹಿತಿ ಪಡೆದಿದ್ದಾರೆ.
ಪಕ್ಷದ ಕೆಲಸಕ್ಕಿಂತ ದೊಡ್ಡ ಕಾರ್ಯಕ್ರಮ ಇತ್ತಾ? ಗೈರಾಗಲು ಅನುಮತಿ ಪಡೆದಿದ್ರಾ? ಎಂದು ಡಿಕೆಶಿ ಬಳಿ ಪ್ರಶ್ನಿಸಿದ್ದಾರೆ. ಇದಕ್ಕೆ ಉತ್ತರಿಸಿದ ಡಿಸಿಎಂ, ಅನುಮತಿ ಪಡೆದಿರುವ ವಿಚಾರ ಗೊತ್ತಿಲ್ಲ. ಸಭೆ ಬಗ್ಗೆ ಎಲ್ಲರಿಗೂ ಮಾಹಿತಿ ಇತ್ತು. ಹಾಜರಾಗುವಂತೆ ಸೂಚಿಸಲಾಗಿತ್ತು ಎಂದು ಮಾಹಿತಿ ನೀಡಿದ್ದಾರೆ.