Saturday, April 1, 2023

Latest Posts

ತೆರೆಗೆ ಬರಲು ರೆಡಿಯಾಗಿದೆ ಉಪೇಂದ್ರ ನಟನೆಯ ‘ಹೋಮ್ ಮಿನಿಸ್ಟರ್’: ಯಾವಾಗ ರಿಲೀಸ್ ಗೊತ್ತಾ?

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬಹು ವರ್ಷಗಳ ಬಳಿಕ ನಟ ಉಪೇಂದ್ರ ನಟನೆಯ ‘ಹೋಮ್ ಮಿನಿಸ್ಟರ್’ ಚಿತ್ರ ತೆರೆಗೆ ಬರಲು ಸಿದ್ಧಟೇನಡೆಸಿದ್ದು, ಸಾಕಷ್ಟು ನಿರೀಕ್ಷೆ ಹುಟ್ಟುಹಾಕಿದೆ.
ಸಿನಿಮಾದಲ್ಲಿ ವೇದಿಕಾ ನಾಯಕಿಯಾಗಿ ನಟಿಸಿದ್ದು, ಇದೀಗ ರಿಲೀಸ್​ ದಿನಾಂಕವನ್ನು ಚಿತ್ರತಂಡ ಘೋಷಣೆ ಮಾಡಿದೆ.
ಏಪ್ರಿಲ್‌ 1ಕ್ಕೆ ಈ ‘ಹೋಮ್ ಮಿನಿಸ್ಟರ್’ ಸಿನಿಮಾ ಅಭಿಮಾನಿಗಳ ಮುಂದೆ ಬರಲು ಸಿದ್ಧವಾಗಿದೆ.
‘ಇದು ನಾನು ಈವರೆಗೂ ಮಾಡಿರದ ಪಾತ್ರವಾಗಿದ್ದು, ತೆಲುಗಿನ ನಿರ್ಮಾಪಕರು ಕನ್ನಡದ ಮೇಲಿನ ಅಭಿಮಾನದಿಂದ ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ.‌ ತೆಲುಗಿನ ಇನ್ನೂ ನೂರು ನಿರ್ಮಾಪಕರು ಬಂದು ಕನ್ನಡ ಚಿತ್ರ ನಿರ್ಮಾಣ ಮಾಡಬೇಕು. ಆ ರೀತಿಯಲ್ಲಿ ‘ಹೋಮ್ ಮಿನಿಸ್ಟರ್’ ಚಿತ್ರವನ್ನು ಯಶಸ್ವಿ ಮಡೋಣ’ ಉಪೇಂದ್ರ ಹೇಳಿದ್ದಾರೆ.
ಈ ಸಿನಿಮಾ ವಿಭಿನ್ನವಾದಂತಹ ಪ್ರಯತ್ನ. ಸಿನಿಮಾ ನೋಡಿದರೆ ಜನರಿಗೆ ಗೊತ್ತಾಗುತ್ತದೆ. ನಾವು ಮಾಡಿದ ಸಿನಿಮಾವನ್ನು ನಾವೇ ಹೊಗಳಬಾರದು. ಹೋಮ್ ಮಿನಿಸ್ಟರ್ ಎಂಬ ಟೈಟಲ್ ಕೇಳಿ ಥಿಯೇಟರ್ ಒಳಗೆ ಹೋದರೆ ನೀವು ಶಾಕ್ ಆಗ್ತೀರಿ. ಅಲ್ಲಿ ಬೇರೆಯದೇ ಹೋಮ್ ಮಿನಿಸ್ಟರ್ ಇರುತ್ತಾರೆ. ಈ ಸಿನಿಮಾದಲ್ಲಿ ಅದೇ ಸಸ್ಪೆನ್ಸ್ ಎಂದು ಸಿನಿಮಾವನ್ನು ಗುಟ್ಟಾಗಿ ಇಟ್ಟಿದ್ದಾರೆ.
ಕರ್ನಾಟಕದಾದ್ಯಂತ ಸುಮಾರು 350ಕ್ಕೂ ಅಧಿಕ ಚಿತ್ರಮಂದಿರಗಳಲ್ಲಿ ‘ಹೋಮ್ ಮಿನಿಸ್ಟರ್’ ಸಿನಿಮಾ ತೆರೆಗೆ ಬರುತ್ತಿದೆ. ಸುಜಯ್ ಕೆ. ಶ್ರೀಹರಿ ನಿರ್ದೇಶನದ ಈ ಚಿತ್ರಕ್ಕೆ ಜಿಬ್ರಾನ್ ಸಂಗೀತ ನೀಡಿದ್ದಾರೆ. ಕುಂಟುನಿ ಎಸ್ ಕುಮಾರ್ ಛಾಯಾಗ್ರಹಣ ಹಾಗೂ ಅಂಟೋನಿ ಅವರ ಸಂಕಲನ ಈ ಚಿತ್ರಕ್ಕಿದೆ.
ವೇದಿಕಾ, ಸುಮನ್ ರಂಗನಾಥ್, ತಾನ್ಯ ಹೋಪ್, ಸಾಧುಕೋಕಿಲ, ಅವಿನಾಶ್, ಮಾಳವಿಕಾ ಅವಿನಾಶ್, ತಿಲಕರು, ಲಾಸ್ಯಾ, ಸುಧಾ ಬೆಳವಾಡಿ, ಶ್ರೀನಿವಾಸ ಮೂರ್ತಿ, ವಿಜಯ್ ಚಂಡೂರ್, ಬೇಬಿ ಆದ್ಯ ಮುಂತಾದವರು ಈ ಸಿನಿಮಾದಲ್ಲಿ ನಟಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!