ಹೊಸದಿಗಂತ ಡಿಜಿಟಲ್ ಡೆಸ್ಕ್:
ದೆಹಲಿಯ ಬೇಗಂಪುರ ಪ್ರದೇಶದಲ್ಲಿ ಮನೆಯ ಮೇಲ್ಛಾವಣಿ ಕುಸಿದು ಇಬ್ಬರು ಮೃತಪಟ್ಟಿದ್ದಾರೆ.ಬಾಡಿಗೆ ಮನೆಯಾಗಿದ್ದು, ಇಲ್ಲಿ ನಾಲ್ವರು ವಾಸವಾಗಿದ್ದರು. ಮನೆ ಕುಸಿತದಿಂದಾಗಿ ಇಬ್ಬರು ಮೃತಪಟ್ಟಿದ್ದು, ಇನ್ನಿಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಈ ಪ್ರದೇಶದಲ್ಲಿ ಮನೆಯಿಂದ ನೀರು ಹರಿದು ಹೋಗಲು ಸೂಕ್ತ ವ್ಯವಸ್ಥೆ ಇಲ್ಲ. ಇದೇ ಕಾರಣದಿಂದ ಮನೆಗಳು ಕುಸಿಯುತ್ತಿವೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.