ವಿವಾಹವನ್ನು ಅಂಗೀಕರಿಸುವಂತೆ ‘ಸುಪ್ರೀಂ’ ಮೆಟ್ಟಿಲೇರಿದ ಸಲಿಂಗಕಾಮಿ ದಂಪತಿ: ಕೋರ್ಟ್ ನಿಂದ ಕೇಂದ್ರ ಸರ್ಕಾರಕ್ಕೆ ನೋಟಿಸ್!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಸಲಿಂಗಕಾಮಿ ದಂಪತಿಗಳು ತಮ್ಮ ವಿವಾಹವನ್ನು ಅಂಗೀಕರಿಸುವಂತೆ ಸಲ್ಲಿಸಿದ ಎರಡು ಅರ್ಜಿಗಳ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ಕೇಂದ್ರ ಸರ್ಕಾರ ಮತ್ತು ಅಟಾರ್ನಿ ಜನರಲ್ ಆರ್.ವೆಂಕಟರಮಣಿ ಅವರಿಗೆ ನೋಟಿಸ್ ಜಾರಿ ಮಾಡಿದೆ.

ಹೈದರಾಬಾದ್‍ನಲ್ಲಿ ಮೂಲದ ಇಬ್ಬರು ಸಲಿಂಗಕಾಮಿಗಳಾದ ಸುಪ್ರಿಯೋ ಚಕ್ರವರ್ತಿ ಮತ್ತು ಅಭಯ್ ಡ್ಯಾಂಗ್ ಈ ಅರ್ಜಿ ಸಲ್ಲಿಸಿದ್ದು, ಒಬ್ಬರ ಆಯ್ಕೆಯ ವ್ಯಕ್ತಿಯನ್ನು ಮದುವೆಯಾಗುವ ಹಕ್ಕನ್ನು LGBTQ+ ನಾಗರಿಕರಿಗೂ ವಿಸ್ತರಿಸಬೇಕು ಎಂದು ಮನವಿ ಮಾಡಿದ್ದರು.

10 ವರ್ಷದ ಹಿಂದೆ ಅಧಿಕೃತ ಮದುವೆ ನಡೆದಿದ್ದರೂ ಈವರೆಗೂ ಅವರು ವಿವಾಹಿತ ದಂಪತಿಗಳ ಹಕ್ಕುಗಳನ್ನು ಆನಂದಿಸಲು ಸಾಧ್ಯವಾಗಿಲ್ಲ. ಈ ಹಿನ್ನೆಲೆ ಸಾಂವಿಧಾನಿಕವಾಗಿ ಅಧಿಕೃತಗೊಳಿಸಲು ಮನವಿ ಮಾಡಿದ್ದಾರೆ.

ಸಿಜೆಐ (CJI) ಡಿ. ವೈ ಚಂದ್ರಚೂಡ್ ಮತ್ತು ನ್ಯಾ. ಹಿಮಾಕೊಹ್ಲಿ ಅವರನ್ನೊಳಗೊಂಡ ಪೀಠವು ವಿಚಾರಣೆ ಬಳಿಕ ನಾಲ್ಕು ವಾರಗಳಿಗೆ ವಿಚಾರಣೆಯನ್ನು ಮುಂದೂಡಿತು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!