ಹೊಸದಿಗಂತ ಕಲಬುರಗಿ:
ಜಿಲ್ಲೆಯಲ್ಲಿ ಹನಿಟ್ರ್ಯಾಪ್ ನಡೆದಿರುವ ಕುರಿತಂತೆ ಈಗಾಗಲೇ ದೂರು ದಾಖಲಾಗಿದ್ದು ಆರೋಪಿಗಳನ್ನು ಬಂಧಿಸಲಾಗಿದೆ. ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯದ ಆರೋಪದ ಹಿನ್ನೆಲೆಯಲ್ಲಿ ಫಾರೆನ್ಸಿಕ್ ವರದಿ ಕೇಳಲಾಗಿದ್ದು ವರದಿ ಆಧರಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ಇಲಾಖೆ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.
ನಗರದ ಐವನ್ ಶಾಹಿ ಅತಿಥಿ ಗೃಹದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹನಿ ಟ್ರ್ಯಾಪ್ ಇದೊಂದು ಗಂಭೀರ ಪ್ರಕರಣವಾಗಿದ್ದು, ಹೆಚ್ಚಿನ ವಿವರಗಳು ಈಗಲೇ ಹೇಳಲು ಆಗದು. ಹನಿಟ್ರ್ಯಾಪ್ ಕಲಬುರಗಿ ಜಿಲ್ಲೆಗೆ ಒಂದು ಕಪ್ಪುಚುಕ್ಕೆಯಾಗಿದೆ. ಆರೋಪಿಗಳು ಯಾವುದೇ ಸಂಘಟನೆಯವರು ಇರಲಿ ಅಥವಾ ಎಂತದ್ದೆ ವ್ಯಕ್ತಿಗಳಾಗಿರಲಿ, ಪೊಲೀಸ್ ತನಿಖೆ ನಂತರ ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದು ಎಂದರು.
ಈ ಹಿನ್ನೆಲೆಯಲ್ಲಿ ಸಮಗ್ರ ತನಿಖೆ ನಡೆಸಲು ಸೆನ್ ಇಲಾಖೆಗೆ ಸೂಚಿಸಲಾಗಿದೆ. ಹನಿಟ್ರ್ಯಾಪ್ ಗೆ ಸಂಬಂಧಿಸಿದಂತೆ ಏನಾದರೂ ದೂರುಗಳಿದ್ದರೆ ನೊಂದವರು ನೇರವಾಗಿ ನನಗೆ ಇಲ್ಲವೇ ನಗರ ಪೊಲೀಸ್ ಕಮೀಷನರ್ ಅವರಿಗೆ ದೂರು ಸಲ್ಲಿಸಲಿ ಅಂತವರ ವಿವರ ಹಾಗೂ ಗುರುತು ಗೌಪ್ಯವಾಗಿಡಲಾಗುವುದು ಎಂದರು.
ಖರ್ಗೆ ಕುಟುಂಬ ರಾಜ್ಯಕ್ಕೆ ದೊಡ್ಡ ಕಪ್ಪು ಚುಕ್ಕೆ