ಹೊಸದಿಗಂತ ಡಿಜಿಟಲ್ ಡೆಸ್ಕ್:
ಈಗಾಗಲೇ ಶಾಸಕ ಮುನಿರತ್ನ ಜಾತಿನಿಂದನೆ, ಬೆದರಿಕೆ ಹಾಗೂ ಹನಿಟ್ರ್ಯಾಪ್ ಮಾಡಿಸಿರುವ ಪ್ರಕರಣಕ್ಕೆ ಸಂಬಂಧಪಟ್ಟಂತೆ ಜೈಲಿಗೆ ಹೋಗಿ ಬಂದಿದ್ದಾರೆ. ಇದೀಗ ಅವರ ವಿರುದ್ಧ ಮತ್ತೊಂದು ಆರೋಪ ಬಂದಿದ್ದು, ಮಾಜಿ ಕಾರ್ಪೊರೇಟರ್ ಒಬ್ಬರ ಮೇಲೆ ಹನಿಟ್ರ್ಯಾಪ್ ಮಾಡಿಸಿದ್ದಾರೆ ಎಂದು ಆರೋಪ ಕೇಳಿ ಬಂದಿದೆ.
ಈ ಕುರಿತಂತೆ ಸ್ವತಃ ಮಾಜಿ ಕಾರ್ಪೊರೇಟರ್ ಮಂಜುಳಾ ಹಾಗೂ ಅವರ ಪತಿ ಲಗ್ಗೆರೆ ನಾರಾಯಣ ಸ್ವಾಮಿ ಅವರು ಗಂಭೀರ ಆರೋಪಗಳನ್ನು ಮಾಡಿದ್ದಾರೆ. ನಗರದ ಖಾಸಗಿ ಹೋಟೆಲ್ ನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ನಮ್ಮ ವಿರುದ್ಧ ಶಾಸಕ ಮುನಿರತ್ನ ಹನಿ ಟ್ರ್ಯಾಪ್ ಮಾಡಿಸಿದ್ದರು ಎಂಬ ಸ್ಪೋಟಕ ಆರೋಪ ಮಾಡಿದರು.
ಮುನಿರತ್ನ ಶಾಸಕನಾಗಿ ಹನಿ ಟ್ರ್ಯಾಪ್ ಮಾಡುವ ಕೆಲಸ ಮಾಡ್ತಿದ್ದ ಜನ ಸಾಮಾನ್ಯರಿಂದ ಹಿಡಿದು ರಾಜ್ಯದ ಓರ್ವ ಮುಖ್ಯ ಮಂತ್ರಿಯವರೆಗೆ ಹನಿ ಟ್ರ್ಯಾಪ್ ಮಾಡಿದ್ದಾನೆ ಎಂದು ಶಾಸಕ ಮುನಿರತ್ನ ವಿರುದ್ಧ ಲಗ್ಗೆರೆ ನಾರಾಯಣ ಸ್ವಾಮಿ ಗಂಭೀರ ಆರೋಪ ಮಾಡಿದ್ದಾರೆ.ನನ್ನ ಹೆಂಡತಿಯ ಮಾನ ಹರಾಜು ಹಾಕಲು ಕೋಟಿ ಡೀಲ್ ಕೊಟ್ಡಿದ್ದ, ನನ್ನ ಹೆಂಡತಿ ಗಟ್ಟಿಗಿತ್ತಿ, ಆದರೂ ಅವಾಗ ಆದ ಅವಮಾನ ಸಹಿಸಿಕೊಳ್ಳಲಾಗದು ಎಂದು ಹೇಳಿದರು.